ಸಾಸ್ವೆಹಳ್ಳಿ: ಇಲ್ಲಿನ ಐತಿಹಾಸಿಕ ಪ್ರಸಿದ್ಧ ಕೋಟೆ ಆಂಜನೇಯಸ್ವಾಮಿ ರಥೋತ್ಸವ ಶನಿವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.
ರಥೋತ್ಸವದ ನಿಮಿತ್ತ ದೇವಸ್ಥಾನದಲ್ಲಿ ಬೆಳಿಗ್ಗೆ ವಿಶೇಷ ಪೂಜೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆದವು.
ರಥವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ, ಎಡೆ ಬಾನ ಅರ್ಪಿಸಿ, ರಥ ಶಾಂತಿ ಪೂಜೆ ಸಲ್ಲಿಸಲಾಯಿತು.
ಭಕ್ತರು ರಥಕ್ಕೆ, ಮೆಣಸು ಮಂಡಕ್ಕಿ, ಬಾಳೆಹಣ್ಣು ತೂರಿ ಭಕ್ತಿ ಸಮರ್ಪಿಸಿದರು. ರಥದಲ್ಲಿ ಕಲ್ಲೇಶ್ವರಸ್ವಾಮಿ, ಚೌಡೇಶ್ವರಿ ದೇವಿ, ನರಸಿಂಹಸ್ವಾಮಿ ಮತ್ತು ಹನುಮಂತದೇವರ ಉತ್ಸವಮೂರ್ತಿ ಪ್ರತಿಷ್ಠಾಪಿಸಲಾಯಿತು.
ರಥೋತ್ಸವಕ್ಕೆ ಜಾನಪದ ಕಲಾ ಮೇಳಗಳು ಮತ್ತು ತಮಟೆ ವಾದ್ಯ ಮೇಳಗಳು ಮೆರುಗು ನೀಡಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.