ADVERTISEMENT

ವಿಜ್ಞಾನ ಪರೀಕ್ಷೆ: 1156 ಮಂದಿ ಗೈರು

ಎಸ್ಸೆಸ್ಸೆಲ್ಸಿ ಪರೀಕ್ಷೆ: ಪರೀಕ್ಷೆ ಬರೆದ 20,725 ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 13:01 IST
Last Updated 29 ಜೂನ್ 2020, 13:01 IST
ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿರುವ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿರುವ ಶ್ರವಣದೋಷವುಳ್ಳ ಮಕ್ಕಳು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿರುವ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿರುವ ಶ್ರವಣದೋಷವುಳ್ಳ ಮಕ್ಕಳು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಎಸ್ಸೆಸ್ಸೆಲ್ಸಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ವಿಜ್ಞಾನ ಪರೀಕ್ಷೆಗೆ 1,156 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. 20,725 ಮಂದಿ ಪರೀಕ್ಷೆ ಬರೆದಿದ್ದಾರೆ.

ಒಟ್ಟು 21,881 ಮಂದಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ ಬರೆದವರಲ್ಲಿ 79 ಮಂದಿ ಕಂಟೈನ್‌ಮೆಂಟ್‌ ವಲಯದಿಂದ ಬಂದವರು. ಅವರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

19,991 ಮಂದಿ ಮೊದಲ ಬಾರಿ ಪರೀಕ್ಷೆಗೆ ಹಾಜರಾದ ಶಾಲಾ ವಿದ್ಯಾರ್ಥಿಗಳು. 492 ಖಾಸಗಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದು, 390 ಮಂದಿ ಪರೀಕ್ಷೆ ಬರೆದಿದ್ದಾರೆ. 102 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ADVERTISEMENT

ನೆರೆರಾಜ್ಯಗಳ ವಿದ್ಯಾರ್ಥಿಗಳು ಯಾರೂ ಪರೀಕ್ಷೆ ಬರೆದಿಲ್ಲ. ಆದರೆ ಬೇರೆ ಜಿಲ್ಲೆಗಳಲ್ಲಿ ಕಲಿಯುತ್ತಿದ್ದವರಲ್ಲಿ 392 ಮಂದಿ ದಾವಣಗೆರೆಯಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡುದ್ದರು. ಅದರಲ್ಲಿ ಒಬ್ಬರು ಗೈರಾಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.