ADVERTISEMENT

ದಾವಣಗೆರೆ: ಬಿಜೆಪಿಯಿಂದ ಬೀಜದುಂಡೆ ತಯಾರಿಕೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 6:34 IST
Last Updated 14 ಜುಲೈ 2021, 6:34 IST
ದಾವಣಗೆರೆಯ ಜಿಎಂಐಟಿ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಬೀಜದುಂಡೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದರು. ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಇದ್ದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ಜಿಎಂಐಟಿ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಬೀಜದುಂಡೆ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಹಾಗೂ ಸಂಸದ ಜಿ.ಎಂ. ಸಿದ್ದೇಶ್ವರ ಚಾಲನೆ ನೀಡಿದರು. ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಇದ್ದರು –ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಇಲ್ಲಿನ ಜಿಎಂಐಟಿ ಕಾಲೇಜಿನ ಆವರಣದಲ್ಲಿ ಮಂಗಳವಾರ ಬೆಳ್ಳಂಬೆಳ್ಳಿಗೆ ಮಳೆಯ ಸಿಂಚನದ ನಡುವೆ ಬೀಜದುಂಡೆ ತಯಾರಿಸುವ ಕಾರ್ಯ ನಡೆಯಿತು.

ಬಿಜೆಪಿ ಮಹಿಳಾ ಮೋರ್ಚಾ, ಯುವ ಮೋರ್ಚಾ, ರೈತ ಮೋರ್ಚಾದ ಕಾರ್ಯಕರ್ತರು ಹುಣಸೆ, ಹೊಂಗೆ, ಬೇವು, ಹೆಬ್ಬೇವು, ಆಲ, ನೇರಳೆ ಬೀಜದುಂಡೆಗಳನ್ನು ಬಿಜೆಪಿ ಕಾರ್ಯಕರ್ತರು ತಯಾರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಬೀಜದುಂಡೆ ತಯಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ADVERTISEMENT

ಮೇಯರ್ ಎಸ್.ಟಿ. ವೀರೇಶ್ ಮಾತನಾಡಿ, ‘ಬಿಜೆಪಿಯಿಂದ 1 ಲಕ್ಷ ಬೀಜದುಂಡೆ ತಯಾರು ಮಾಡುವ ಕಾರ್ಯಕ್ರಮ ಇದಾಗಿದೆ. ಇವುಗಳನ್ನು ತಯಾರು ಮಾಡಿ ಖಾಲಿ ಜಾಗ, ಗೋಮಾಳ, ಅರಣ್ಯ ಸೇರಿದಂತೆ ಇತರೆಡೆ ಬಿಸಾಡುತ್ತೇವೆ. ಮಳೆಗಾಲದಲ್ಲಿ ಇವುಗಳು ಬೆಳೆದು ಗಿಡಗಳಾಗುತ್ತವೆ. ಇದರಿಂದ ಜಿಲ್ಲೆಯಲ್ಲಿ ಹಸೀರಿಕರಣ ಹೆಚ್ಚಾಗುತ್ತದೆ’ ಎಂದರು.

ಪ್ರಸ್ತುತ ದಿನಗಳಲ್ಲಿ ಹಸಿರೀಕರಣದೊಂದಿಗೆ ಅರಣ್ಯ ಪ್ರದೇಶ ಹೆಚ್ಚಿಸುವ ಜವಾಬ್ದಾರಿ ಎಲ್ಲರ ಮೇಲಿದ್ದು, ಅದರಂತೆ ಎಲ್ಲರೂ ಸೇರಿ ಸಂಘಟನೆಯೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ಮೇಯರ್ ಹೇಳಿದರು.

‘ಅರಣ್ಯ ನಾಶಕ್ಕೆ ಪರಿಹಾರ ಕಂಡುಕೊಳ್ಳುವ ಉದ್ದೆಶದಿಂದ ಬೀಜದುಂಡೆ ಮೂಲಕ ಹಸಿರು ಬೆಳೆಸುವ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬರಡು ಭೂಮಿಯಲ್ಲಿ ಬೀಜದುಂಡೆ ಬಿತ್ತನೆ ಮಾಡುವ ಮೂಲಕ ಕಾಡನ್ನಾಗಿ ಪರಿವರ್ತಿಸಿ ಪ್ರಕೃತಿಯನ್ನು ನಳನಳಿಸುವಂತೆ ಮಾಡುವ ವಿನೂತನ ಪ್ರಯತ್ನ ಇದಾಗಿದೆ’ ಎಂದುಸ್ವಚ್ಛ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಶುಭಾವಿಜಯ್ ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ಮುಖಂಡರಾದ ಶಿವಯೋಗಿಸ್ವಾಮಿ, ದೇವರಮನಿ ಶಿವಕುಮಾರ್, ರಾಜನಹಳ್ಳಿ ಶಿವಕುಮಾರ್, ಶಿವಶಂಕರ್, ಬಿ.ಪಿ. ಹರೀಶ್, ಬಿ.ಎಸ್. ಜಗದೀಶ್, ಹನುಮಂತ್ ನಾಯ್ಕ್‌, ಮಂಜ್ಯಾನಾಯ್ಕ್‌, ಎಚ್.ನಾಗರಾಜ್, ಮಂಜುಳಮ್ಮ, ದೇವಿರಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.