ಮಲೇಬೆನ್ನೂರು: ಸಮೀಪದ ಯಲವಟ್ಟಿ ತಾಂಡಾದಲ್ಲಿ ₹ 1.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇವಾಲಾಲ್ ಮರಿಯಮ್ಮ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮ ಏಪ್ರಿಲ್ 30ರಂದು ನಡೆಯಲಿದೆ ಎಂದು ಮುಖಂಡ ಅನಂತ ನಾಯ್ಕ ತಿಳಿಸಿದರು.
‘ಕಾರ್ಯಕ್ರಮದ ಅಂಗವಾಗಿ 29ರಂದು ಬೆಳಿಗ್ಗೆ ಶಿಲಾ ಮೂರ್ತಿಗಳ ಗ್ರಾಮ ಪ್ರದಕ್ಷಿಣೆ, ಸಾಂಪ್ರದಾಯಿಕ ವೇಷ–ಭೂಷಣಗಳೊಂದಿಗೆ ಮಹಿಳೆಯರ ಮೆರವಣಿಗೆ, ಸಂಜೆ ಪುಣ್ಯಾಹವಾಚನ, ಹೋಮ ನಡೆಯಲಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
30ರಂದು ಬೆಳಿಗ್ಗೆ 4.30ಕ್ಕೆ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಗುರು ಸಿದ್ಧಾಶ್ರಮದ ಯೋಗಾನಂದ ಸ್ವಾಮೀಜಿ ನೇತೃತ್ವದಲ್ಲಿ ಜರುಗಲಿದೆ. ಮೇ 1ರಂದು ಬೆಳಿಗ್ಗೆ 11ಕ್ಕೆ ಧರ್ಮಸಭೆ ನಡೆಯಲಿದ್ದು, ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಉದ್ಘಾಟಿಸುವರು. ಬಿ. ಅಜ್ಜಾ ನಾಯ್ಕ ಅಧ್ಯಕ್ಷತೆ ವಹಿಸುವರು. ತರಳಬಾಳು ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಗುರು ಸಿದ್ಧಾಶ್ರಮದ ಯೋಗಾನಂದ ಸ್ವಾಮೀಜಿ ಗವಿ ಸಿದ್ದೇಶ್ವರ ಮಠದ ಕುಮಾರ ಮಹಾರಾಜ್ ಸ್ವಾಮೀಜಿ, ಸಾಲೂರು ಮಠದ ಶೈನಾಭಗತ್ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.
ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಮೂರು ದಿನ ಅನ್ನ ದಾಸೋಹ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ತಿಳಿಸಿದರು.
ಮುಖಂಡರಾದ ಹೀರಾನಾಯ್ಕ, ಎಚ್.ಆರ್. ಕೃಷ್ಣಾನಾಯ್ಕ, ಬಿ.ಎಚ್. ಮಂಜಾನಾಯ್ಕ, ಎಸ್.ಎಲ್. ಶಿವರಾಜ್, ಈರಾ ನಾಯ್ಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.