ಹೊನ್ನಾಳಿ: ತಾಲ್ಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯಲ್ಲಿ ಬಾಲಕಿಗೆ (10) ಲೈಂಗಿಕ ಕಿರುಕುಳ ನೀಡಲಾಗಿದ್ದು, ಆರೋಪಿ ಮಹೇಶ್ (30) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
‘ಗ್ರಾಮದಲ್ಲಿ ಬುಧವಾರ ಸಂಜೆ ಶಾಲೆ ಬಿಟ್ಟ ನಂತರ ಬಾಲಕಿ ಹಾಗೂ ಆಕೆಯ ಸ್ನೇಹಿತೆ ಶಾಲೆಯಲ್ಲಿಯೇ ಹೋಂವರ್ಕ್ ಮಾಡುತ್ತಿದ್ದರು. ಆಗ ಆರೋಪಿಯು ಆಕೆಯ ಸ್ನೇಹಿತೆಯನ್ನು ಗದರಿಸಿ ಹೊರಗೆ ಕಳುಹಿಸಿ, ನಂತರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎಂದು ಪೋಷಕರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.