ADVERTISEMENT

Photos: ಕಲ್ಲೇಶ್ವರ ರೈಸ್‌ ಮಿಲ್ ಆವರಣದಲ್ಲಿ ನೆರವೇರಿದ ಶಾಮನೂರು ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2025, 14:05 IST
Last Updated 15 ಡಿಸೆಂಬರ್ 2025, 14:05 IST
<div class="paragraphs"><p>ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್‌ ಮಿಲ್ ಆವರಣದಲ್ಲಿ ಸೋಮವಾರ ಸಂಜೆ 6ಕ್ಕೆ ನೆರವೇರಿತು.</p></div>

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ನಗರದ ಆನೆಕೊಂಡದ ಕಲ್ಲೇಶ್ವರ ರೈಸ್‌ ಮಿಲ್ ಆವರಣದಲ್ಲಿ ಸೋಮವಾರ ಸಂಜೆ 6ಕ್ಕೆ ನೆರವೇರಿತು.

   

ಮುಖ್ಯಮಂತ್ರಿ ಸಿದ್ದರಾಮಯ್ಯ  ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಪೊಲೀಸರು ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರಿ ಗೌರವ ಸಲ್ಲಿಸಿದರು.

ADVERTISEMENT

ಶಿವಶಂಕರಪ್ಪ ಅವರ ಪಾರ್ಥಿವ ಶರೀರವನ್ನು ಕುಣಿಯಲ್ಲಿ ಯೋಗ ಭಂಗಿಯಲ್ಲಿ ಕೂರಿಸಲಾಯಿತು. ಜೊತೆಗೆ 500ಕ್ಕೂ ಹೆಚ್ಚು ವಿಭೂತಿಗಳನ್ನು ಇಡಲಾಯಿತು. ಪುತ್ರರಾದ ಎಸ್.ಎಸ್. ಬಕ್ಕೇಶ್, ಎಸ್.ಎಸ್. ಗಣೇಶ್ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅಂತಿಮ ವಿಧಿವಿಧಾನ ಪೂರೈಸಿದರು.

ಶಿವಶಂಕರಪ್ಪ ಅವರ ಪತ್ನಿ ಪಾರ್ವತಮ್ಮ ಅವರ ಸಮಾಧಿಯ ಪಕ್ಕದಲ್ಲೇ 9x5 ಅಡಿ ಸುತ್ತಳತೆಯ ಕುಣಿಯಲ್ಲಿ ದೀಪಗಳನ್ನು ಇಡಲು ಮೆಟ್ಟಿಲು ನಿರ್ಮಾಣ ಮಾಡಲಾಗಿತ್ತು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನಗಳು ನೆರವೇರಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.