
ಚನ್ನಗಿರಿ: ‘ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆ ಶೀಘ್ರದಲ್ಲಿ ಆಗಲಿದ್ದು, ಹಿಂದೆ ಇದ್ದ ಕಠಿಣ ನಿಯಮಗಳನ್ನು ಸಡಿಲಿಸಲು ರಾಜ್ಯ ಸರ್ಕಾರ ಒಪ್ಪಿದೆ. ಹಾಗೆಯೇ ಸಂಘ ವಿರೋಧಿ ಚಟುವಟಿಕೆಯಲ್ಲಿ ತೊಡಗುವ ಸದಸ್ಯರ ಮೇಲೆ ನಿರ್ಧಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದರು.
ಸೋಮವಾರ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಗೆ ಭೇಟಿ ನೀಡಿ ಮಾತನಾಡಿದರು.
ಸಂಘ ಎಂದ ಮೇಲೆ ಹಲವಾರು ಸಮಸ್ಯೆಗಳು ಇದ್ದೇ ಇರುತ್ತವೆ. ಅವುಗಳನ್ನು ಸಮರ್ಥವಾಗಿ ಎದುರಿಸಬೇಕು. ಸಂಘದ ಅಭಿವೃದ್ಧಿ ದೃಷ್ಟಿ ಮುಖ್ಯವಾಗಿರುತ್ತದೆ. ಈ ಬಾರಿಯ ಬಜೆಟ್ ನಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ನಿವೇಶನಗಳನ್ನು ಆಯಾ ಪಟ್ಟಣ, ನಗರ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೀಸಲಿಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಂಘ ವಿರೋಧಿ ಚಟುವಟಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಹಾಗೆಯೇ ಆರೋಗ್ಯ ಸಂಜೀವಿನಿ ಯೋಜನೆಯನ್ನು ಎಲ್ಲ ಪತ್ರಕರ್ತರಿಗೆ ನೀಡುವಂತೆ ಒತ್ತಾಯಿಸಿ ಮನವಿ ಮಾಡಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಏಕಬೋಟೆ, ಪ್ರಧಾನ ಕಾರ್ಯದರ್ಶಿ ಬದ್ರಿ, ರಾಷ್ಟ್ರೀಯ ಸಮಿತಿ ಸದಸ್ಯ ವೀರೇಶ್ ಒಡೆಯರ್, ತಾಲ್ಲೂಕು ಘಟಕದ ಅಧ್ಯಕ್ಷ ಟಿ. ಮಹಾರುದ್ರಪ್ಪ, ಕಾರ್ಯದರ್ಶಿ ಅಣ್ಣೋಜಿರಾವ್ ಪವಾರ್, ಖಜಾಂಚಿ ದೇವರಾಜ್, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಜೆ. ಕಿರಣ್, ರಘು ಪ್ರಸಾದ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.