ADVERTISEMENT

ದಾವಣಗೆರೆ: 11ಕ್ಕೆ ಸಿದ್ಧಲಿಂಗೇಶ್ವರ ಜಯಂತ್ಯುತ್ಸವ

​ಪ್ರಜಾವಾಣಿ ವಾರ್ತೆ
Published 8 ಜನವರಿ 2026, 2:34 IST
Last Updated 8 ಜನವರಿ 2026, 2:34 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ದಾವಣಗೆರೆ: ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ಜಯಂತ್ಯುತ್ಸವ, ಸಮಗ್ರ ವಚನ ಕೃತಿ ಲೋಕಾರ್ಪಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ರೇಣುಕ ಮಂದಿರದಲ್ಲಿ ಜ.11ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ನೆಲಮಂಗಲದ ಬಸವಣ್ಣದೇವರ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.

ADVERTISEMENT

‘ಸಿದ್ಧಲಿಂಗೇಶ್ವರಸ್ವಾಮಿ ಉತ್ಸವಮೂರ್ತಿಯ ಮೆರವಣಿಗೆ ನಡೆಯಲಿದ್ದು, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರು ಜಯದೇವ ವೃತ್ತದಲ್ಲಿ ಬೆಳಿಗ್ಗೆ 9ಕ್ಕೆ ಚಾಲನೆ ನೀಡಲಿದ್ದಾರೆ. ಮಹಾಂತ ರುದ್ರೇಶ್ವರ ಸ್ವಾಮೀಜಿ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ. ಸ್ತಬ್ಧಚಿತ್ರಗಳ ಮೆರವಣಿಗೆ ಸಾಗಲಿದೆ’ ಎಂದು ಬುಧವಾರ ಪತ್ರಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸಭಾ ಕಾರ್ಯಕ್ರಮ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ತೋಂಟದ ಸಿದ್ಧಲಿಂಗ ಶಿವಯೋಗಿಗಳವರ ‘ಸಮಗ್ರ ವಚನ ಕೃತಿ’ಯನ್ನು ಬಸವಪ್ರಭು ಸ್ವಾಮೀಜಿ ಬಿಡುಗಡೆ ಮಾಡಲಿದ್ದಾರೆ’ ಎಂದು ಹೇಳಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಎಂ. ಶಿವಕುಮಾರ್, ಮುಖಂಡರಾದ ಎನ್.ಎಸ್. ರಾಜಣ್ಣ, ಶಶಿಧರ ಬಸಾಪುರ, ಎ.ಎಸ್. ಸಿದ್ಧಲಿಂಗಸ್ವಾಮಿ, ವೀಣಾ ಮಂಜುನಾಥ್ ಹಾಜರಿದ್ದರು.

ಸಾಣೇಹಳ್ಳಿ ಶ್ರೀಗೆ 'ತೋಂಟದ ಶ್ರೀ' ಪ್ರಶಸ್ತಿ

ಸಾಣೇಹಳ್ಳಿಯ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರನ್ನು 'ತೋಂಟದ ಸಿದ್ಧಲಿಂಗಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ರೇಣುಕ ಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಿದ್ದಲಿಂಗ ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.