
ದಾವಣಗೆರೆ: ‘ಮಾಧ್ಯಮಗಳಿಗೆ ಸಿಎಂ ಕುರ್ಚಿ ಬಿಟ್ಟು ಬೇರೆ ವಿಚಾರಗಳೇ ಇಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.
ಶ್ಯಾಮನೂರು ಶಿವಶಂಕರಪ್ಪ ನುಡಿನಮನ ಕಾರ್ಯಕ್ರಮಕ್ಕೆ ಇಲ್ಲಿಗೆ ಆಗಮಿಸಿದ ಅವರನ್ನು ‘ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗೆ ಭಾರಿ ಪೈಪೋಟಿ ನಡೆಯುತ್ತಿದೆಯಲ್ಲ?’ ಎಂಬ ಸುದ್ದಿಗಾರರು ಕೇಳಿದ್ದಕ್ಕೆ ಹೀಗೆ ಪ್ರತಿಕ್ರಿಯಿಸಿದರು.
ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಒಂದೇ ಹೆಲಿಕಾಪ್ಟರ್‌ನಲ್ಲಿ ಹೊರಟು ದಾವಣಗೆರೆಗೆ ಬಂದಿಳಿದರು. ಕಾರ್ಯಕ್ರಮ ಮುಗಿಸಿ ಒಟ್ಟಿಗೆ ಬೆಂಗಳೂರಿಗೆ ಹಿಂದಿರುಗಿದರು.
‘ಬಸ್‌ಗಳಲ್ಲಿ ಸುರಕ್ಷತೆ ಕೈಗೊಳ್ಳಲಾಗುವುದು’
‘ಚಿತ್ರದುರ್ಗದ ಬಳಿ ಗುರುವಾರ ನಸುಕಿನಲ್ಲಿ ನಡೆದ ಬಸ್ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಸ್‌ಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಿದ್ದರಾಮಯ್ಯ ತಿಳಿಸಿದರು. ‘ಬಸ್ ದುರಂತಕ್ಕೆ ಲಾರಿ ಚಾಲಕನೇ ಹೊಣೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಲಾರಿಯು ಹೆದ್ದಾರಿ ವಿಭಜಕ ದಾಟಿ ಬಸ್‌ಗೆ ಡಿಕ್ಕಿ ಹೊಡೆದಿದೆ. ತನಿಖೆಯ ಬಳಿಕ ಸಂಪೂರ್ಣ ಮಾಹಿತಿ ತಿಳಿಯಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.