ADVERTISEMENT

ಧರ್ಮ ಒಡೆಯುವ ಯತ್ನ: ಸಿದ್ದರಾಮಯ್ಯಗೆ ತಪ್ಪಿನ ಅರಿವಾಗಿದೆ- ಶಾಮನೂರು ಶಿವಶಂಕರಪ್ಪ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 3:29 IST
Last Updated 21 ಆಗಸ್ಟ್ 2022, 3:29 IST
ಸಿದ್ದರಾಮಯ್ಯ, ಶಾಮನೂರು ಶಿವಶಂಕರಪ್ಪ
ಸಿದ್ದರಾಮಯ್ಯ, ಶಾಮನೂರು ಶಿವಶಂಕರಪ್ಪ   

ದಾವಣಗೆರೆ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಈಗ ತಪ್ಪಿನ ಅರಿವಾಗಿದೆ’ ಎಂದು ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ,ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

‘ಸಿದ್ದರಾಮಯ್ಯ ಪಶ್ಚಾತ್ತಾಪ ಪಟ್ಟಿದ್ದಾರೆ, ಅಲ್ಲಿಗೆ ಮುಗಿಯಿತು. ಮತ್ತೊಮ್ಮೆ ಧರ್ಮ ಒಡೆಯುವ ಪ್ರಯತ್ನಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. ಅವರಿಗೆ ಒಳ್ಳೆಯ ಬುದ್ಧಿ ಬಂದಿದೆ. ಈ ವಿಚಾರದಲ್ಲಿ ಅವರ ಪಾತ್ರವೇನೂ ಇಲ್ಲ. ಬೇರೆಯವರ ಒತ್ತಡವಿತ್ತು. ಆರೋಪ ಮಾತ್ರ ಅವರ ಮೇಲೆ ಬಂದಿತ್ತು ಅಷ್ಟೇ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ಅವರೊಬ್ಬರಿಂದ ಏನೂ ಮಾಡಲು ಆಗುವುದಿಲ್ಲ. ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದೆ’ ಎಂದು ಶಾಮನೂರು ಶಿವಶಂಕರಪ್ಪ ಅವರು ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಸ್ಥಾನ ನೀಡಿರುವುದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಮತ್ತೊಮ್ಮೆ ಸ್ಪರ್ಧಿಸುತ್ತೇನೆ’ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.