ADVERTISEMENT

6 ತಿಂಗಳು ಮುಂಚೆಯೇ ಟಿಕೆಟ್ ಘೋಷಣೆ: ಸಿದ್ದರಾಮಯ್ಯ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2022, 6:33 IST
Last Updated 24 ಏಪ್ರಿಲ್ 2022, 6:33 IST
ಸಿದ್ದರಾಮಯ್ಯ
ಸಿದ್ದರಾಮಯ್ಯ   

ದಾವಣಗೆರೆ: ‘ವಿಧಾನಸಭಾ ಚುನಾವಣೆ ಆರು ತಿಂಗಳು ಇರುವಾಗಲೇ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಲು ಪ್ರಯತ್ನ ಮಾಡುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹರಿಹರದ ಪಂಚಮಸಾಲಿ ಪೀಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶನಿವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಹುಲ್ ಗಾಂಧಿ ಅವರು 150 ಸ್ಥಾನ ಗೆಲ್ಲಬೇಕು ಎಂದು ನಮಗೆ ಗುರಿ ನಿಗದಿ ಮಾಡಿದ್ದಾರೆ. ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ. ಮುಖ್ಯಮಂತ್ರಿ ಯಾರು ಆಗಬೇಕು ಎಂಬುದನ್ನು ಗೆದ್ದ ಶಾಸಕರು ಹಾಗೂ ಹೈಕಮಾಂಡ್ ನಿರ್ಧರಿಸುತ್ತಾರೆ’ ಎಂದು ಸ್ಪಷ್ಪಪಡಿಸಿದರು.

ADVERTISEMENT

ಹುಬ್ಬಳ್ಳಿ ಗಲಭೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ‘ವಿವಾದಾತ್ಮಕ ಪೋಸ್ಟ್ ಹಾಕಿದ್ದ ಅಭಿಷೇಕ್ ಹಿರೇಮಠ ಹಿಂದೂ ಸಮಾಜದನು. ಅವನ ಹಿಂದೆ ಯಾರಿದ್ದಾರೆ? ನಮ್ಮ ಕಡೆ ಏಕೆ ಬೊಟ್ಟು ಮಾಡುತ್ತಿದ್ದಾರೆ’ ಎಂದು ಪ್ರಶ್ನಿಸಿದರು.

‘ರಾಜ್ಯದಲ್ಲಿ ಬುಲ್ಡೋಜರ್ ಆಡಳಿತ ತರುವುದಾದರೆ ಮೊದಲು ಶ್ರೀರಾಮ ಸೇನೆ ಮೇಲೆಯೇ ಬುಲ್ಡೋಜರ್ ಹರಿಸಲಿ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.