
ವಿ.ಸೋಮಣ್ಣ ಮತ್ತು ಸಿದ್ದರಾಮಯ್ಯ
ದಾವಣಗೆರೆ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಜಾಣಕುರುಡುತನ ಪ್ರದರ್ಶಿಸುವುದನ್ನು ಬಿಟ್ಟು ಕೇಂದ್ರಕ್ಕೆ ಬರಲಿ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಅವರೊಂದಿಗೆ ನಾವೂ ಹೋಗುತ್ತೇವೆ’ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದರು.
‘ರೈತರು ಹೋರಾಟ ನಡೆಸುತ್ತಿರುವ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ರೈತರ ಭಾವನೆ ಅರಿತು ವಾಸ್ತವಾಂಶ ಮನವರಿಕೆ ಮಾಡಿಕೊಡಲು ಪ್ರಯತ್ನಿಸಬೇಕಿತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಂದೇ ಎಂಬುದನ್ನು ಅರ್ಥ ಮಾಡಿಕೊಳ್ಳದೇ ಹೋದರೆ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದು ವ್ಯರ್ಥ’ ಎಂದು ಶುಕ್ರವಾರ ಸುದ್ದಿಗಾರರ ಎದುರು ಅಸಮಾಧಾನ ಹೊರಹಾಕಿದರು.
‘ರಾಜ್ಯ ಸರ್ಕಾರ ತನ್ನ ಕೆಲಸ ಮಾಡದೆ ಕೇಂದ್ರದ ಮೇಲೆ ಗೂಬೆ ಕೂರಿಸುವುದು ತಪ್ಪು. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಜವಾಬ್ದಾರಿಯನ್ನು ಮೊದಲು ನಿರ್ವಹಿಸಲಿ. ಪ್ರತಿಯೊಂದಕ್ಕೂ ಹಾರಿಕೆ ಉತ್ತರ ನೀಡಿ ಉದ್ಧಟನ ಪ್ರದರ್ಶಿಸುವುದನ್ನು ಬಿಡಲಿ. ನಡವಳಿಕೆಯನ್ನು ಸರಿಪಡಿಸಿಕೊಂಡು ಗೌರವಯುತವಾಗಿ ವರ್ತಿಸಿದರೆ ರಾಜ್ಯದ ಬಿಜೆಪಿ ಸಂಸದರು ಅವರ ಬೆನ್ನಿಗೆ ನಿಲ್ಲಲು ಸಿದ್ಧರಿದ್ದೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.