
ದಾವಣಗೆರೆ: ಶ್ರೇಷ್ಠ ವಚನಕಾರ, ಕಾಯಕಯೋಗಿ ಸಿದ್ಧರಾಮೇಶ್ವರರ ಆದರ್ಶ ಎಂದಿಗೂ ಪ್ರಸ್ತುತ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಉದ್ಪಾಟಿಸಿ ಅವರು ಮಾತನಾಡಿದರು.
‘ಸಿದ್ಧರಾಮೇಶ್ವರ ಜೀವನ ಚರಿತ್ರೆಗೆ ಸಂಬಂಧಿಸಿದ ದಾಖಲೆಗಳು ವಚನ, ಕಾವ್ಯ ಶಾಸನ ಐತಿಹ್ಯಗಳಲ್ಲಿ ದೊರೆಯುತ್ತವೆ. ಶ್ರೀಶೈಲದ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದ ಅವರು, ಸೊನ್ನಲಿಗೆಗೆ ಬಂದು ದೇವಾಲಯ ಸ್ಥಾಪಿಸಿದರು. ಸಕಲ ಜೀವಗಳಿಗಾಗಿ ಕೆರೆ– ಕಟ್ಟೆಗಳನ್ನು ಕಟ್ಟಿಸಿದರು’ ಎಂದು ಹೇಳಿದರು.
‘ಕಲ್ಯಾಣಕ್ಕೆ ತೆರಳಿ ಚನ್ನಬಸವಣ್ಣನವರಿಂದ ಇಷ್ಟಲಿಂಗದೀಕ್ಷೆ ಪಡೆದರು. ಅನುಭವ ಮಂಟಪದಲ್ಲಿ ಪಾಲ್ಗೊಂಡು, ಮಹಾಶಿವಯೋಗಿಯಾದರು’ ಎಂದರು.
‘ಧೂಡಾ’ ಅಧ್ಯಕ್ಷ ದಿನೇಶ್ ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.