ADVERTISEMENT

ಕೋವಿಡ್‌: ಸಂಸದರ ನಿಧಿಯಿಂದ ₹ 1 ಕೋಟಿ ನೀಡಿದ ಸಿದ್ದೇಶ್ವರ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 14:26 IST
Last Updated 3 ಏಪ್ರಿಲ್ 2020, 14:26 IST
ಜಿ.ಎಂ. ಸಿದ್ದೇಶ್ವರ
ಜಿ.ಎಂ. ಸಿದ್ದೇಶ್ವರ   

ದಾವಣಗೆರೆ: ಮಹಾಮಾರಿ ಕೋವಿಡ್‌–19 ರೋಗವನ್ನು ದೇಶದಲ್ಲಿ ನಿಯಂತ್ರಿಸಲು ಕೇಂದ್ರ ಸರ್ಕಾರ ಸಮರೋಪಾದಿಯಲ್ಲಿ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನೆರವಾಗುವ ಉದ್ದೇಶದಿಂದ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಿಂದ ₹ 1 ಕೋಟಿ ಅನ್ನು ಸಂಸದ ಜಿ.ಎಂ. ಸಿದ್ದೇಶ್ವರ ನೀಡಿದ್ದಾರೆ.

ಇದರ ಜೊತೆಗೆ ವೈಯಕ್ತಿಕವಾಗಿ ₹ 2 ಲಕ್ಷವನ್ನು ದೇಣಿಗೆಯಾಗಿ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT