ADVERTISEMENT

ದಾವಣಗೆರೆ | ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ: ವ್ಯಕ್ತಿಗೆ ಚಾಕು ಇರಿತ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 19:07 IST
Last Updated 10 ನವೆಂಬರ್ 2025, 19:07 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾವಣಗೆರೆ: ಸಾಮಾಜಿಕ ಜಾಲತಾಣದಲ್ಲಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ರೌಡಿಶೀಟರ್‌ವೊಬ್ಬ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾನೆ.

ನಗರದ ಟಿ.ಅಸ್ಗರ್ ಚಾಕು ಇರಿತದಿಂದ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೌಡಿಶೀಟರ್ ಖಾಲೀದ್ ಫೈಲ್ವಾನ್ ಚಾಕುವಿನಿಂದ ಇರಿದ ಆರೋಪಿ.

ADVERTISEMENT

ಟಿ.ಅಸ್ಗರ್ ಜೆಡಿಎಸ್ ಜೊತೆ ಒಡನಾಟ ಇಟ್ಟುಕೊಂಡಿದ್ದು, ಖಾಲೀದ್ ಪೈಲ್ವಾನ್ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಇಬ್ಬರ ನಡುವೆ ಆಗಾಗ ವಾಗ್ವಾದ ನಡೆಯುತ್ತಿತ್ತು. ಈ ಕುರಿತು ಅಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪರಸ್ಪರ ದೂರು-ಪ್ರತಿದೂರು ದಾಖಲಾಗಿದ್ದವು.

ಬಾಷಾ ನಗರದ 5ನೇ ಕ್ರಾಸ್ ಬಳಿ ಸೋಮವಾರ ರಾತ್ರಿ ಅಸ್ಗರ್ ಅಡ್ಡಗಟ್ಟಿದ ಆರೋಪಿ, ಕೊಲೆಗೆ ಯತ್ನಿಸಿದ್ದಾನೆ. ಗಾಯಾಳು ದಾಖಲಾದ ಆಸ್ಪತ್ರೆ ಬಳಿ ಜನರು ಜಮಾಯಿಸಿದ್ದು, ಆರೋಪಿ ಬಂಧನಕ್ಕೆ ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.