
ಪ್ರಜಾವಾಣಿ ವಾರ್ತೆ
ಮತದಾರರ ಪಟ್ಟಿ
ಕೃಪೆ:ಪಿಟಿಐ
ದಾವಣಗೆರೆ: ವಿಧಾನಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಪರಿಶೀಲಿಸಿಕೊಳ್ಳಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮಂಗಳವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯ ಜಿಲ್ಲೆಯಲ್ಲಿ 16,594 ಪುರುಷ, 13,145 ಮಹಿಳೆಯರು ಸೇರಿದಂತೆ 29,739 ಮತದಾರಿದ್ದಾರೆ ಎಂದು ತಿಳಿಸಿದರು.
‘ಅಂತಿಮ ಪಟ್ಟಿಯಲ್ಲಿ ಸೇರ್ಪಡೆಯಾದ ಮತದಾರರು, ತಮ್ಮ ವ್ಯಾಪ್ತಿಯ ತಾಲ್ಲೂಕು ಕಚೇರಿಗಳಲ್ಲಿ ಹೆಸರುಗಳನ್ನು ಪರಿಶೀಲಿಸಿಕೊಳ್ಳಬಹುದು. ದಾವಣಗೆರೆ ನಗರ ಮತ್ತು ಕಸಬಾ ಹೊಬಳಿ ವ್ಯಾಪ್ತಿಯಲ್ಲಿರುವವರು ಮಹಾನಗರ ಪಾಲಿಕೆ ಕಚೇರಿಯಲ್ಲಿ ಖಚಿತಪಡಿಸಿಕೊಳ್ಳಬಹುದು’ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.