ADVERTISEMENT

ಎಸ್ಪಿಗೆ ಕೋವಿಡ್‌, ಡಿಸಿ ಹೋಂ ಕ್ವಾರಂಟೈನ್‌

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 16:05 IST
Last Updated 7 ಆಗಸ್ಟ್ 2020, 16:05 IST

ದಾವಣಗೆರೆ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಕೊರೊನಾ ಸೋಂಕು ಶುಕ್ರವಾರ ದೃಢಪಟ್ಟಿದ್ದು, ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಕಾರಣ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೋಂ ಕ್ವಾರಂಟೈನ್‌ ಆಗಿದ್ದಾರೆ.

‘ತುರ್ತು ಸಂದರ್ಭದಲ್ಲಿ ಗೃಹ ಕಚೇರಿಯಲ್ಲಿ ಲಭ್ಯವಿದ್ದು, ಮನೆಯಿಂದಲೇ ಕಾರ್ಯನಿರ್ವಹಿಸುತ್ತೇನೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಎಸ್ಪಿಗೆ ಸೋಂಕು ದೃಢಪಟ್ಟ ಕಾರಣ ಅವರ ಪ್ರಾಥಮಿಕ ಸಂಪರ್ಕದ 18 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT