ADVERTISEMENT

ಜಗಳೂರು | ₹ 2 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ಅಭಿವೃದ್ಧಿ: ಬಿ.ದೇವೇಂದ್ರಪ್ಪ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 5:41 IST
Last Updated 11 ಸೆಪ್ಟೆಂಬರ್ 2025, 5:41 IST
ಜಗಳೂರಿನಲ್ಲಿ ಬುಧವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಂತದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಬಿ. ದೇವೇಂದ್ರಪ್ಪ ಚಾಲನೆ ನೀಡಿದರು
ಜಗಳೂರಿನಲ್ಲಿ ಬುಧವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಂತದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಬಿ. ದೇವೇಂದ್ರಪ್ಪ ಚಾಲನೆ ನೀಡಿದರು   

ಜಗಳೂರು: ತಾಲ್ಲೂಕಿನಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲ್ಲೂಕು ಕ್ರೀಡಾಂಗಣವನ್ನು ₹ 2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಂತದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಾಜಿ ಶಾಸಕ ಟಿ.ಗುರುಸಿದ್ದನಗೌಡ ಅವರ ಆಡಳಿತಾವಧಿಯಲ್ಲಿ ಸುಸಜ್ಜಿತವಾದ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಪ್ರಥಮಬಾರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸಂತಸ ತಂದಿದೆ. ಶೀಘ್ರ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು. ಇದೀಗ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ₹ 2 ಕೋಟಿ ಅನುದಾನ ಮೀಸಲಿಡಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ಅನುದಾನ ನೀಡಲಾಗುವುದು’ ಎಂದರು.

ADVERTISEMENT

‘ವಲಯ ಮಟ್ಟದಿಂದ ತಾಲ್ಲೂಕು ಮಟ್ಟದವರೆಗೆ ಆಯ್ಕೆಗೊಂಡಿರುವ ಕ್ರೀಡಾಪಟುಗಳು ಜಿಲ್ಲಾ, ರಾಜ್ಯಮಟ್ಟದಲ್ಲಿ ತಾಲ್ಲೂಕಿನ ಕೀರ್ತಿಪತಾಕೆ ಹಾರಿಸಬೇಕು. ತೀರ್ಪುಗಾರರು ಪಾರದರ್ಶಕವಾಗಿ ತೀರ್ಪು ನೀಡಬೇಕು. ಕ್ರೀಡಾಪಟುಗಳಿಗೆ ಕುಡಿಯುವ ನೀರು, ಆರೋಗ್ಯಸೇವೆ, ಊಟದ ವ್ಯವಸ್ಥೆ ಕಲ್ಪಿಸಲಾಗಿದೆ’ ಎಂದು ಬಿಇಒ ಹಾಲಮೂರ್ತಿ ಹೇಳಿದರು.

ಶಾಸಕ ಬಿ.ದೇವೇಂದ್ರಪ್ಪ ಅವರು ಕ್ರೀಡಾಕೂಟಕ್ಕೆ ವೈಯಕ್ತಿಕವಾಗಿ ₹ 50,000 ಧನಸಹಾಯ ನೀಡಿದರು.

ಬಿಆರ್‌ಸಿ ಡಿಡಿ ಹಾಲಪ್ಪ, ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ರಾಜಪ್ಪ, ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಸುರೇಶ್ ರೆಡ್ಡಿ, ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮೂರ್ತಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕರಿಬಸಪ್ಪ, ವಿಜಯಲಕ್ಷ್ಮಿ, ಅನಿತಾ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರೂಪಾ, ಪ್ಯಾರೀಮಾ ಬಾನು, ಅಂಜಿನಾಯ್ಕ, ಸತೀಶ್, ವೆಂಕಟೇಶ್, ಮುಖಂಡರಾದ ಬಡಪ್ಪ, ಪಲ್ಲಾಗಟ್ಟೆ ಶೇಖರಪ್ಪ ಇದ್ದರು.

ಜಗಳೂರಿನಲ್ಲಿ ಬುಧವಾರ ತಾಲ್ಲೂಕು ಕ್ರೀಡಾಂಗಣದಲ್ಲಿ ಬುದವಾರ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಂತದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಶಾಸಕ ಬಿ. ದೇವೇಂದ್ರಪ್ಪ ಚಾಲನೆ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.