ADVERTISEMENT

ಶ್ರೀರಾಮುಲು ಒತ್ತಡ ಹಾಕಿ ಮೀಸಲಾತಿ ಹೆಚ್ಚಿಸಿಕೊಳ್ಳಬೇಕು: ಸತೀಶ್‌ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 7:38 IST
Last Updated 9 ಫೆಬ್ರುವರಿ 2021, 7:38 IST
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ    

ದಾವಣಗೆರೆ: ಶ್ರೀರಾಮುಲು ಅವರದ್ದೇ ಸರ್ಕಾರ ಇದೆ. ಕುಂಬಳಕಾಯಿ ಹಾಗೂ ಕುಡುಗೋಲು ಎರಡೂ ಅವರ ಕೈಯಲ್ಲೇ ಇದೆ. ಹೀಗಾಗಿ ಅವರು ಮುಖ್ಯಮಂತ್ರಿ ಮೇಲೆ ಒತ್ತಡ ಹಾಕಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು. ನಾವೂ ನಿಮ್ಮ ಜೊತೆಗೆ ಬರುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ಹೇಳಿದರು.

ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಬೇಕಾಗಿತ್ತು. ಆದರೆ, ಈ ಕೆಲಸವನ್ನು ಮಾಡದೇ ಇರುವುದರಿಂದ ನಮ್ಮ ಸರ್ಕಾರಕ್ಕೆ ಸಮಾಜದವರು ತಕ್ಕ ಪಾಠ ಕಲಿಸಿದ್ದಾರೆ. ವಿಳಂಬ ಮಾಡಿದರೆ ಪಶ್ಚಾತ್ತಾಪ ಪಡಬೇಕಾಗುತ್ತದೆ. ಹೀಗಾಗಿ ನ್ಯಾಯಸಮ್ಮತವಾಗಿ ಕೇಳುವ ಮೀಸಲಾತಿಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ರಮೇಶ್‌ ಜಾರಕಿಹೊಳಿ ಹಾಗೂ ಶ್ರೀರಾಮುಲು ಅವರು ತಲಾ 100 ಎಂ.ಜಿ. ಮಾತ್ರೆ ಇದ್ದಂತಿದೆ. ಇಬ್ಬರೂ ಸೇರಿ ಸರ್ಕಾರದ ಮೇಲೆ ಒತ್ತಡ ಹಾಕಿದರೆ ಮೀಸಲಾತಿ ಪಡೆದುಕೊಳ್ಳುವುದು ಕಷ್ಟವಾಗುವುದಿಲ್ಲ. ಈ ಇಬ್ಬರು ನಾಯಕರು ತಮ್ಮ ಶಕ್ತಿಯನ್ನು ಸಮಾಜದ ಪರವಾಗಿಯೂ ಪ್ರಯೋಗಿಸಲಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT