ADVERTISEMENT

ದಾವಣಗೆರೆ: 120 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 6:57 IST
Last Updated 19 ಜುಲೈ 2021, 6:57 IST
ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಲಾಯಿತು
ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಲಾಯಿತು   

ದಾವಣಗೆರೆ: ಜಿಲ್ಲೆಯ 120 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿತು.

21,720 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷಾ ಕೇಂದ್ರಕ್ಕೆ ಬಂದ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನ್ ಮಾಡಿ ಕೊಠಡಿಗೆ ಕಳುಹಿಸಲಾಯಿತು. ವಿದ್ಯಾರ್ಥಿಗಳಿಗೆ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಉಚಿತವಾಗಿ ಮಾಸ್ಕ್ ವಿತರಿಸಲಾಯಿತು.

ADVERTISEMENT

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಅಧಿಕಾರಿಗಳು ಮೋತಿ ವೀರಪ್ಪ ವಿದ್ಯಾಲಯದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಕ್ಕಳಿಗೆ ಧೈರ್ಯ ತುಂಬಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.