ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: 178 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 14:50 IST
Last Updated 21 ಸೆಪ್ಟೆಂಬರ್ 2020, 14:50 IST
ದಾವಣಗೆರೆಯ ಮೋತಿ ವೀರಪ್ಪ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಹೊರಬರುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್
ದಾವಣಗೆರೆಯ ಮೋತಿ ವೀರಪ್ಪ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು ಹೊರಬರುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರು–ಪ್ರಜಾವಾಣಿ ಚಿತ್ರ/ ಸತೀಶ ಬಡಿಗೇರ್   

ದಾವಣಗೆರೆ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಸೋಮವಾರ 178 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಉಳಿದವರು ಯಾವುದೇ ಸಮಸ್ಯೆ ಇಲ್ಲದೇ ಪರೀಕ್ಷೆ ಬರೆದರು.

ಗಣಿತ ಪರೀಕ್ಷೆ ನಡೆದಿದ್ದು, 1,881 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 1,703 ಮಂದಿ ಪರೀಕ್ಷೆ ಬರೆದರು.

ತಾಲ್ಲೂಕುವಾರು ಮಾಹಿತಿ: ಚನ್ನಗಿರಿ ತಾಲ್ಲೂಕಿನಲ್ಲಿ 231 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಅದರಲ್ಲಿ 201 ವಿದ್ಯಾರ್ಥಿಗಳು ಹಾಜರಾಗಿದ್ದು, 30 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ನೋಂದಾಯಿಸಿಕೊಂಡ 307 ಮಂದಿಯಲ್ಲಿ 291 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 16 ವಿದ್ಯಾರ್ಥಿಗಳು ಗೈರಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲ್ಲಿ771 ವಿದ್ಯಾರ್ಥಿಗಳಲ್ಲಿ 687 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 84 ಮಂದಿ ಬಂದಿಲ್ಲ.

ADVERTISEMENT

ಹರಿಹರ ತಾಲ್ಲೂಕಿನಲ್ಲಿ 175 ವಿದ್ಯಾರ್ಥಿಗಳಲ್ಲಿ 160 ಮಂದಿ ಪರೀಕ್ಷೆ ಬರೆದರು. 15 ಮಂದಿ ಗೈರಾದಾದರು. ಹೊನ್ನಾಳಿ ತಾಲ್ಲೂಕಿನಲ್ಲಿ 106 ವಿದ್ಯಾರ್ಥಿಗಳಲ್ಲಿ 284 ವಿದ್ಯಾರ್ಥಿಗಳು ಹಾಜರಾದರು. 22 ಮಂದಿ ಬಂದಿಲ್ಲ. ಜಗಳೂರು ತಾಲ್ಲೂಕಿನಲ್ಲಿ 91 ವಿದ್ಯಾರ್ಥಿಗಳಲ್ಲಿ 80 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 11 ಮಂದಿ ಗೈರು ಹಾಜರಾಗಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.