ADVERTISEMENT

ಇಂದಿನಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

4 ಸಾವಿರ ವಿದ್ಯಾರ್ಥಿಗಳ ನೋಂದಣಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2020, 15:31 IST
Last Updated 20 ಸೆಪ್ಟೆಂಬರ್ 2020, 15:31 IST

ದಾವಣಗೆರೆ: ಸೆಪ್ಟೆಂಬರ್ 21ರಿಂದ 28ವರೆಗೆ ಜಿಲ್ಲೆಯ 13 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿವೆ.

ಚನ್ನಗಿರಿಯ 2, ಜಗಳೂರಿನ 1, ಹರಿಹರದ 2, ಹೊನ್ನಾಳಿಯ 2, ದಾವಣಗೆರೆ ದಕ್ಷಿಣ ವಲಯದ 4, ದಾವಣಗೆರೆ ಉತ್ತರ ವಲಯದ 2 ಕೇಂದ್ರಗಳಲ್ಲಿ2,562 ವಿದ್ಯಾರ್ಥಿಗಳು ಹಾಗೂ 1,501 ವಿದ್ಯಾರ್ಥಿಯರು ಸೇರಿ 4063 ವಿದ್ಯಾರ್ಥಿಗಳುಪರೀಕ್ಷೆಗೆ ನೋಂದಣಿ ಮಾಡಿಸಿದ್ದಾರೆ.

‘ಕೋವಿಡ್ ಮಾರ್ಗಸೂಚಿ ಅನ್ವಯ ಪರೀಕ್ಷೆಗಳು ನಡೆಯಲಿದ್ದು, ಈಗಾಗಲೇ ಪರೀಕ್ಷೆ ನಡೆಯುವ184 ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಅನ್ನು ನೀಡಲಾಗುವುದು. ಈವರೆಗೆ ಯಾವೊಬ್ಬ ವಿದ್ಯಾರ್ಥಿಗೆ ಕೋವಿಡ್ ಇಲ್ಲ.‌ ಕೊರೊನಾ ಸೋಂಕು ಕಾಣಿಸಿಕೊಂಡ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ’ ಎಂದು ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಹೇಳಿದರು.

ADVERTISEMENT

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುವ 13 ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ನಿಷೇಧಾಜ್ಞೆ ಹೊರಡಿಸಿ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕು ಎಂದು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.