ಯುವಜನೋತ್ಸವ (ಸಂಗ್ರಹ ಚಿತ್ರ)
ದಾವಣಗೆರೆ: ರಾಜ್ಯ ಮಟ್ಟದ ಯುವಜನೋತ್ಸವವನ್ನು ಜ.5ಮತ್ತು 6ರಂದು ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಏಳು ವಿಭಾಗಗಳಲ್ಲಿ ಸಮನಾಂತರ ವೇದಿಕೆಗಳಲ್ಲಿ ಏಕಕಾಲಕ್ಕೆ ಸ್ಪರ್ಧೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
‘ಜ.5ರಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವಜನೋತ್ಸವ ಉದ್ಘಾಟಿಸಲಿದ್ದಾರೆ. ಇಲ್ಲಿ ವಿಜೇತರಾದವರು ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
‘ಜನಪದ ನೃತ್ಯ, ಜನಪದ ಗೀತೆ, ವಿಜ್ಞಾನ ವಸ್ತುಪ್ರದರ್ಶನ, ಕಥೆ, ಕವನ ರಚನೆ, ಚಿತ್ರಕಲೆ ಹಾಗೂ ಚರ್ಚೆ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಒಂದೂವರೆ ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧಾಳುಗಳ ರಾತ್ರಿ ಊಟಕ್ಕೆ ಮಾಂಸಾಹಾರವನ್ನೂ ನೀಡಲು ತೀರ್ಮಾನಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.