ADVERTISEMENT

ಅಭ್ಯರ್ಥಿ ಗೆಲ್ಲಿಸದ ಸಚಿವರನ್ನು ಕೈಬಿಡಿ: ಚನ್ನಗಿರಿ ಶಾಸಕ

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 19:52 IST
Last Updated 10 ಜೂನ್ 2024, 19:52 IST
ಶಿವಗಂಗಾ ಬಸವರಾಜು
ಶಿವಗಂಗಾ ಬಸವರಾಜು   

ದಾವಣಗೆರೆ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ತಾವು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲೇ ಲೀಡ್ ಕೊಡಿಸದಿರುವ ಹಾಗೂ ಪಕ್ಷವನ್ನು ಗೆಲ್ಲಿಸದಿರುವ ಸಚಿವರನ್ನು ಸಂಪುಟದಿಂದ ಕೈಬಿಟ್ಟು, ಹೊಸಬರಿಗೆ ಅವಕಾಶ ನೀಡಬೇಕು’ ಎಂದು ಚನ್ನಗಿರಿಯ ಕಾಂಗ್ರೆಸ್‌ ಶಾಸಕ ಬಸವರಾಜು ಶಿವಗಂಗಾ ಆಗ್ರಹಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಪಿಸಿಸಿ ಅಧ್ಯಕ್ಷರು ಪ್ರತಿಯೊಬ್ಬ ಸಚಿವರಿಗೂ, ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸುವ ಜವಾಬ್ದಾರಿ ನೀಡಿದ್ದರು. ಆದರೆ, ಅಭ್ಯರ್ಥಿಗಳನ್ನು ಗೆಲ್ಲಿಸುವುದಿರಲಿ, ಸಚಿವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರಗಳಲ್ಲೇ ಪಕ್ಷಕ್ಕೆ ಲೀಡ್ ಕೊಡಿಸಿಲ್ಲ. ಅಂಥ ಸಚಿವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

‘ರಾಹುಲ್ ಗಾಂಧಿ ಹಾಗೂ ಪಕ್ಷದ ಹಿರಿಯ ನಾಯಕರು ಇಂತಹ ಸಚಿವರ ವಿರುದ್ಧ ಕ್ರಮ‌ ಕೈಗೊಳ್ಳಬೇಕು. ನಮಗೆ ಪಕ್ಷ ಮುಖ್ಯವೇ ಹೊರತು, ವ್ಯಕ್ತಿ ಮುಖ್ಯವಲ್ಲ. 5 ಗ್ಯಾರಂಟಿ ಯೋಜನೆಗಳನ್ನು ನೀಡಿದರೂ ಹೆಚ್ಚು ಸೀಟು ಬಂದಿಲ್ಲ. ಕಾರ್ಯಕರ್ತರೊಂದಿಗೆ ಹಗಲಿರುಳು ಶ್ರಮಿಸಿ ನಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿದ್ದೇವೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್ ಅವರು ತಾವು ಪ್ರತಿನಿಧಿಸುವ ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ಲೀಡ್ ಕೊಡಿಸದಿದ್ದರೂ, ಅವರನ್ನು ಗೆಲ್ಲಿಸಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.