ಪೊಲೀಸ್
(ಸಾಂದರ್ಭಿಕ ಚಿತ್ರ)
ದಾವಣಗೆರೆ: ಇಲ್ಲಿನ ಬೇತೂರು ರಸ್ತೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಫ್ಲೆಕ್ಸ್ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಶುರುವಾದ ಗಲಾಟೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಕಾರ್ಲ್ ಮಾರ್ಕ್ಸ್ ನಗರದ 13ನೇ ಕ್ರಾಸ್ ಬಳಿ ಮನೆಯೊಂದರ ಮುಂದೆ ಅನ್ಯ ಧರ್ಮೀಯರು ಫ್ಲೆಕ್ಸ್ ಅಳವಡಿಸಿದ್ದಾರೆ. ಇದನ್ನು ಯುವಕರ ಗುಂಪೊಂದು ಪ್ರಶ್ನಿಸಿದಾಗ ಗಲಾಟೆ ಶುರುವಾಗಿದೆ. ಈ ವೇಳೆ ಬಡಾವಣೆಯ ಕೆಲ ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಸ್ಥಳಕ್ಕೆ ಧಾವಿಸಿದ ಆಜಾದ್ ನಗರ ಠಾಣೆಯ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದ್ದಾರೆ. ಆಕ್ಷೇಪಾರ್ಹ ಫ್ಲೆಕ್ಸ್ ತೆರವುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.