ADVERTISEMENT

ರಿಪ್ಪನ್‌ಪೇಟೆ | ‘ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 7:45 IST
Last Updated 1 ಡಿಸೆಂಬರ್ 2025, 7:45 IST
ಬೆಳ್ಳೂರು ಸಮೀಪದ ಹೆಬ್ಬಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಶ್ರೇಷ್ಠ ಛದ್ಮ ವೇಷದಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮುಟ್ಟಕ್ಕೆ ಆಯ್ಕೆಯಾಗಿದ್ದಾಳೆ
ಬೆಳ್ಳೂರು ಸಮೀಪದ ಹೆಬ್ಬಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಶ್ರೇಷ್ಠ ಛದ್ಮ ವೇಷದಲ್ಲಿ ಪ್ರಥಮ ಸ್ಥಾನ ಗಳಿಸಿ ತಾಲ್ಲೂಕು ಮುಟ್ಟಕ್ಕೆ ಆಯ್ಕೆಯಾಗಿದ್ದಾಳೆ   

ರಿಪ್ಪನ್‌ಪೇಟೆ: ‘ಪ್ರತಿಭಾ ಕಾರಂಜಿಯು ವಿದ್ಯಾರ್ಥಿಗಳ ಕ್ರಿಯಾಶೀಲ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯಾಗಿದೆ’ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬೆಳ್ಳೂರು ಶಿವಮೂರ್ತಿ ಹೇಳಿದರು. 

ಸಮೀಪದ ಬೆಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ನಡೆದ ಕ್ಲಸ್ಟರ್‌ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಮಾತನಾಡಿದರು. 

‘ಗ್ರಾಮೀಣ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ತೊರೆದು ಓದಿನಲ್ಲಿ ಆಸಕ್ತಿ ಮೈಗೂಡಿಸಿಕೊಳ್ಳಬೇಕು’ ಎಂದರು. 

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಾವತಿ ಸತೀಶ್ ಕಾರ್ಯಕ್ರಮ ಉದ್ಘಾಟಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ ಬಿ.ಎಲ್. ಅಧ್ಯಕ್ಷತೆ ವಹಿಸಿದ್ದರು. 

ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಬಂಡಿ, ಬಿಇಒ ಗಣೇಶ್ ವೈ., ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಷಣ್ಮುಖಪ್ಪ, ಸದಸ್ಯರಾದ ತಿಮ್ಮಪ್ಪ, ಅರುಣ್ ಕಟ್ಟೆ, ರಾಜೇಶ್, ರವೀಂದ್ರ ಗೌಡ, ಶಿವಪ್ಪ, ಜಗದೀಶ್ ಕಾಗಿನೆಲ್ಲಿ, ನಾಗರಾಜ್, ಶಿಕ್ಷಣ ಇಲಾಖೆಯ ರಂಗನಾಥ್, ಶೇಷಾಚಲ ನಾಯ್ಕ, ಕರಿಬಸಪ್ಪ, ರುಹಿನ್ ತಾಜ್, ಶೀಲಾವತಿ ಹಾಜರಿದ್ದರು. 

ಮುಖ್ಯ ಶಿಕ್ಷಕಿ ವಿದ್ಯಾರಾಣಿ ಸ್ವಾಗತಿಸಿದರು. ಶಿಕ್ಷಕ ಮೋಹನ್ ನಿರೂಪಿಸಿ, ಶೀಲಾ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.