ADVERTISEMENT

ಟಿಕ್‌ಟಾಕ್‌ನಲ್ಲಿ ವಿಡಿಯೊ ಅಪ್ಲೋಡ್ ಮಾಡಿ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2020, 15:14 IST
Last Updated 7 ಫೆಬ್ರುವರಿ 2020, 15:14 IST

ದಾವಣಗೆರೆ: ನಗರದ ಹೊರವಲಯದ ಮಾಗಾನಗಳ್ಳಿಯಲ್ಲಿ ಕೌಟಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಟಿಕ್‌ಟಾಕ್‌ನಲ್ಲಿ ವಿಡಿಯೊ ಅಪ್‌ಲೋಡ್‌ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗರಾಜು ಅಲಿಯಾಸ್ ರಾಜು (34) ಆತ್ಮಹತ್ಯೆ ಮಾಡಿಕೊಂಡವರು. ನಾಗರಾಜ್ ಮದ್ಯವ್ಯಸನಿಯಾಗಿದ್ದು, ಪತ್ನಿಯ ಜೊತೆ ಜಗಳವಾಡಿಕೊಂಡು ವಾರದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಶುಕ್ರವಾರದಿಂದ ಟಿಕ್‌ಟಾಕ್‌ನಲ್ಲಿ ವಿಡಿಯೊ ಹರಿದಾಡುತ್ತಿದೆ.

ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.