
ಪ್ರಜಾವಾಣಿ ವಾರ್ತೆದಾವಣಗೆರೆ: ಇಲ್ಲಿನ ಆಂಜನೇಯ ಮಿಲ್ ಬಡಾವಣೆಯಲ್ಲಿ ಗರ್ಭಿಣಿಯೊಬ್ಬರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಕಲ್ಲದೇವರು ಗ್ರಾಮದ ನಿವಾಸಿರೇಣುಕಾ (21)ಆತ್ಮಹತ್ಯೆ ಮಾಡಿಕೊಂಡವರು.
ಚಾಲಕ ಪ್ರಕಾಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು. ‘ಪತಿಯ ಮನೆಯವರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಮೃತಳ ಪೋಷಕರು ದೂರು ನೀಡಿದ್ದಾರೆ.
ಪತಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.