
ಚನ್ನಗಿರಿ: ನವದೆಹಲಿಯ ಭಾರತ್ ಮಂಟಪದಲ್ಲಿ ಈಚೆಗೆ ನಡೆದ ‘ವಿಷನ್ ಫಾರ್ ಸುಜಲಾಂ ಭಾರತ್’ ಶೃಂಗ ಸಭೆಯಲ್ಲಿ ಚನ್ನಗಿರಿ ತಾಲ್ಲೂಕಿನ ಹಿರೇಮಳಲಿ ಗ್ರಾಮ ಪಂಚಾಯಿತಿ ‘ಸುಜಲಾಂ ಭಾರತ್ ಗೌರವ’ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಹಿರೇಮಳಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿನ ಸಮುದಾಯ ಒಗ್ಗೂಡಿಸುವಿಕೆ, ನೀರಿನ ಸಂರಕ್ಷಣೆ ಮತ್ತು ಸುಸ್ಥಿರತೆಯ ಕಾರ್ಯಾಚರಣೆ ಮತ್ತು ನಿರ್ವಹಣೆಗಳಿಗೆ ಸಂಬಂಧಿಸಿದಂತೆ ವಿನೂತನ ಅಂಶಗಳನ್ನು ಕಾರ್ಯಾನುಷ್ಠಾನ ಮಾಡುವ ಮೂಲಕ 24X7 ಕುಡಿಯುವ ನೀರಿನ ಪದ್ಧತಿಯನ್ನು ಅನುಷ್ಠಾನಗೊಳಿಸಿರುವುದಕ್ಕೆ ಈ ಪ್ರಶಸ್ತಿ ಲಭಿಸಿದೆ.
ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಹಿರೇಮಳಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್. ರಶ್ಮಿ ಹಾಗೂ ತಂಡ ಕೇಂದ್ರ ಸಚಿವ ವಿ. ಸೋಮಣ್ಣ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗಮ್ಮ ಸಂತೋಷ್, ಸದಸ್ಯರಾದ ವಿಜಯನಾಯ್ಕ, ಸುಕನ್ಯಾ, ಎಂ.ಎಸ್. ರಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.