ADVERTISEMENT

ವಾಲ್ಮೀಕಿ ಸಮುದಾಯ ಭವನದ ಕಾಮಗಾರಿ ವೀಕ್ಷಿಸಿದ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 3:39 IST
Last Updated 9 ಸೆಪ್ಟೆಂಬರ್ 2021, 3:39 IST
ದಾವಣಗೆರೆಯ ಬಿಟಿ ಲೇಔಟ್‌ನಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ವೀಕ್ಷಿಸಿದರು
ದಾವಣಗೆರೆಯ ಬಿಟಿ ಲೇಔಟ್‌ನಲ್ಲಿ ನಿರ್ಮಾಣವಾಗುತ್ತಿರುವ ವಾಲ್ಮೀಕಿ ಭವನದ ಕಾಮಗಾರಿಯನ್ನು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ವೀಕ್ಷಿಸಿದರು   

ದಾವಣಗೆರೆ: ನಗರದ ಬಿ.ಟಿ. ಲೇಔಟ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಭವನದ ಕಾಮಗಾರಿಯನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಬುಧವಾರ ವೀಕ್ಷಿಸಿದರು.

ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ವಿಭಾಗದಿಂದ ಭವನ ನಿರ್ಮಾಣ ಕಾರ್ಯ ನಡೆಯುತ್ತಿದೆ. ಗುತ್ತಿಗೆದಾರ ವೆಂಕಟರೆಡ್ಡಿ ಟೆಂಡರ್ ಪಡೆದಿದ್ದಾರೆ.

₹ 10 ಕೋಟಿ ವೆಚ್ಚದಲ್ಲಿ ಈ ಭವನ ನಿರ್ಮಾಣವಾಗುತ್ತಿದೆ. ಸದ್ಯ ₹ 4.90 ಕೋಟಿ ಮಂಜೂರಾಗಿದ್ದು ಈ ಪೈಕಿ 3.30ಕೋಟಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಎಂಜಿನಿಯರ್ ವೆಂಕಟೇಶ್ ತಿಳಿಸಿದ್ದಾರೆ.

ADVERTISEMENT

ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ ವೀರಣ್ಣ, ಹೊದಿಗೆರೆ ರಮೇಶ್, ಹದಡಿ ಹಾಲಪ್ಪ, ಹುಲಿಕಟ್ಟೆ ಶಿವಣ್ಣ, ಶ್ಯಾಗಲೆ ಮಂಜುನಾಥ್, ನಾಗರಾಜ್ ಬೆಳವನೂರ, ಮಲ್ಲಾಪುರ ದೇವರಾಜ್, ಎಂಜಿನಿಯರ್‌ಗಳಾದ ಪರಮೇಶ್ವರಪ್ಪ, ಪುಟ್ಟಸ್ವಾಮಿ ನಾಗರಾಜ್, ರವಿಪ್ರಕಾಶ್, ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.