ಮಲೇಬೆನ್ನೂರು: ಪಟ್ಟಣದಲ್ಲಿ ಸಾಮಾಜಿಕ– ಶೈಕ್ಷಣಿಕ ಸಮೀಕ್ಷೆಗೆ ನಿಯೋಜಿಸಿದ್ದ ಶಿಕ್ಷಕಿ ಸಾಕಮ್ಮ ಮಂಗಳವಾರ ಅಸ್ವಸ್ಥರಾಗಿ ಬಿದ್ದಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
‘ಕಳೆದ ಒಂದು ವಾರದಿಂದ ಸಮೀಕ್ಷೆಯಲ್ಲಿ ಪಟ್ಟಣದ ವಿವಿಧಡೆ ಓಡಾಟ ನಡೆಸಿದ್ದ ಕಾರಣ ಮೊಣಕಾಲು, ಮಂಡಿ ನೋವು ಹಾಗೂ ಜ್ವರ ಬಂದಿದೆ. ಕೆಲಸ ಮಾಡಲು ಕಷ್ಟ ಆಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ
ವಿಷಯ ತಿಳಿಯುತ್ತಿದ್ದಂತೆ ಪಿಎಸ್‌ಐ ಹಾರೂನ್ ಅಖ್ತರ್ ಆಗಮಿಸಿ ಅಸ್ವಸ್ಥರಾಗಿದ್ದ ಶಿಕ್ಷಕಿಯನ್ನು ಆಸ್ಪತ್ರೆಗೆ ಕಳುಹಿಸಿ ನಾಗರಿಕರ ಪ್ರಶಂಸೆಗೆ ಪಾತ್ರರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.