ADVERTISEMENT

ಜಾತಿಗಳ ಮಧ್ಯೆ ವೈಷಮ್ಯ; ಶಿಕ್ಷಕ ಅಮಾನತು

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 7:43 IST
Last Updated 17 ಏಪ್ರಿಲ್ 2024, 7:43 IST

ದಾವಣಗೆರೆ: ಜಗಳೂರು ತಾಲ್ಲೂಕಿನ ಹನುಮಂತಾಪುರ ಗೊಲ್ಲರಹಟ್ಟಿ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಆಂಜನೇಯನಾಯ್ಕ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಆದೇಶಿಸಿದ್ದಾರೆ. 

ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುವುದು, ಶಾಲೆಗೆ ಗೈರಾಗುವುದು, ರಾಜಕೀಯ ಪಕ್ಷಗಳ ಜೊತೆ ಗುರುತಿಸಿಕೊಳ್ಳುವುದು, ಬೇರೆ ಶಿಕ್ಷಕರ ಮೇಲೆ ಒತ್ತಡ ಹೇರುವುದು ಸೇರಿದಂತೆ ಶಿಕ್ಷಕ ಆಂಜನೇಯನಾಯ್ಕ ವಿರುದ್ಧ ಹಲವು ದೂರುಗಳು ಕೇಳಿಬಂದಿದ್ದವು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಅವರನ್ನು ಬೇರೆ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ದೂರು ಕೂಡ ನೀಡಿದ್ದರು. ಆಂಜನೇಯನಾಯ್ಕ ವಿರುದ್ಧ ಜಗಳೂರು ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ADVERTISEMENT

ಆಂಜನೇಯನಾಯ್ಕ ನಡತೆ ಕುರಿತಂತೆ ಎಸ್‌ಪಿ, ಸಿಇಒ ವರದಿ ಸಲ್ಲಿಸಿದ್ದರು. ಕರ್ನಾಟಕ ನಾಗರಿಕ ಸೇವಾ ನಡತೆ ನಿಯಮಾವಳಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.