ADVERTISEMENT

ದಾವಣಗೆರೆ| ಬೋಧನೆಯಲ್ಲಿ ಮಾತೃ ವಾತ್ಸಲ್ಯ ಇರಲಿ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:38 IST
Last Updated 6 ಸೆಪ್ಟೆಂಬರ್ 2025, 4:38 IST
<div class="paragraphs"><p>ದಾವಣಗೆರೆಯಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರದಾನ ಮಾಡಿದರು.</p></div>

ದಾವಣಗೆರೆಯಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಲ್ಲಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಪ್ರದಾನ ಮಾಡಿದರು.

   

ದಾವಣಗೆರೆ: ಮಾನಸಿಕ ಒತ್ತಡ, ಅನಾರೋಗ್ಯಕರ ಜೀವನ ಶೈಲಿ, ಸಾಮಾಜಿಕ ಜಾಲತಾಣ ಸೇರಿ ಹಲವು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಎದುರಿಸುತ್ತಿದ್ದಾರೆ. ಅವರು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಶಿಕ್ಷಕರ ಬೋಧನೆಯಲ್ಲಿ ಮಾತೃ ವಾತ್ಸಲ್ಯವೂ ಇರಬೇಕು ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಸಲಹೆ ನೀಡಿದರು.

ಇಲ್ಲಿನ ಹದಡಿ ರಸ್ತೆಯ ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

‘ಶಾಲೆಗೆ ಬರುವ ವಿದ್ಯಾರ್ಥಿಗಳು ಖಾಲಿ ಕ್ಯಾನ್ವಸ್‌ ಇದ್ದಂತೆ. ಅವರನ್ನು ರೂಪಿಸುವ ಹೊಣೆಗಾರಿಕೆ ಶಿಕ್ಷಕರ ಮೇಲಿದೆ. ಉತ್ತಮ ಶಿಕ್ಷಣ ನೀಡಿ ಬುನಾದಿ ಹಾಕುವ ಜವಾಬ್ದಾರಿಯನ್ನು ಶಿಕ್ಷಕರು ನಿರ್ವಹಿಸಬೇಕು. ಆಗ ಮಾತ್ರ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಲು ಸಾಧ್ಯ’ ಎಂದು ಹೇಳಿದರು.

‘ಜಿಲ್ಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ಸಿಗಬೇಕು. ಹಣಕಾಸು ಸಾಕ್ಷರತೆ, ಬಾಹ್ಯಾಕಾಶ, ವೃತ್ತಿ ಮಾರ್ಗದರ್ಶನ ಸೇರಿ ಹಲವು ರೀತಿಯ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಯತ್ನವೊಂದು ನಡೆಯುತ್ತಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಶೇ 66ಕ್ಕೆ ನಿಂತಿರುವುದು ಬೇಸರದ ಸಂಗತಿ. ಶೇ 100ರಷ್ಟು ಫಲಿತಾಂಶ ಪಡೆದ ಶಾಲೆಯ ಮಾದರಿಯನ್ನು ಅನುಸರಿಸಬೇಕು’ ಎಂದು ಸಲಹೆ ನೀಡಿದರು.

‘ಶಿಕ್ಷಕರಿಗೆ ಪುಸ್ತಕವೇ ಸಂಪತ್ತು. ಆದರೆ, ಬಹುತೇಕರ ಮನೆಗಳಲ್ಲಿ ಪುಸ್ತಕ, ದಿನಪತ್ರಿಕೆಗಳೇ ಇರುವುದಿಲ್ಲ. ದೈನಂದಿನ ವಿದ್ಯಾಮಾನ ಅರಿಯದ, ಜ್ಞಾನ ಭಂಡಾರ ಹೊಂದಿರದ ವ್ಯಕ್ತಿ ಶಿಕ್ಷಕರಾಗಲು ಸಾಧ್ಯವಿಲ್ಲ. ವೈಚಾರಿಕ ಚಿಂತನೆ, ಪ್ರಯೋಗಶೀಲತೆ ಹಾಗೂ ಬಹುಶಿಸ್ತೀಯ ಅಧ್ಯಯನಕ್ಕೆ ಒಳಪಟ್ಟಾಗ ಮಾತ್ರ ಹೊಸ ಅರ್ಥ ವಿಮಾಂಸೆ ಕಟ್ಟಲು ಸಾಧ್ಯ’ ಎಂದು ಪ್ರೊ.ಎ.ಬಿ. ರಾಮಚಂದ್ರಪ್ಪ ಅಭಿಪ್ರಾಯಪಟ್ಟರು.

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು 18 ಶಿಕ್ಷಕರಿಗೆ ಪ್ರದಾನ ಮಾಡಲಾಯಿತು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೊಟ್ರೇಶ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಎಸ್. ಒಡೆನಪುರ, ಶಾಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಉಪನಿರ್ದೇಶಕಿ ಎಸ್.ಗೀತಾ, ಬಿಇಒಗಳಾದ ಎಚ್‌.ಆರ್‌. ವಿಶಾಲಾಕ್ಷಿ, ಪುಷ್ಪಲತಾ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.