ದಾವಣಗೆರೆ: ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆಯಂತೆ ಬಿಜೆಪಿ ಕಾರ್ಯಕರ್ತರು ಹಲವು ದೇವಾಲಯಗಳ ಆವರಣವನ್ನು ಸ್ವಚ್ಛಗೊಳಿಸಿದರು.
ದಾವಣಗೆರೆ ಹೊಂಡದ ಸರ್ಕಲ್ ತುಳಸಿ ಪಾರ್ಕ್‌ನ ಅರಳೀಮರ ಪಕ್ಕದ ಕೇದಾರ ಲಿಂಗೇಶ್ವರ ದೇವಸ್ಥಾನ ಹಾಗೂ ಚಂದ್ರಮೌಳೇಶ್ವರಿ ದೇವಸ್ಥಾನದ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.
ಸಂಸದ ಜಿ.ಎಂ.ಸಿದ್ದೇಶ್ವರ, ವಿಧಾನ ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಜಿಲ್ಲಾ ಉಪಾಧ್ಯಕ್ಷ ಶ್ರೀನಿವಾಸ ದಾಸಕರಿಯಪ್ಪ, ರೈತ ಮೊರ್ಚಾ ರಾಜ್ಯ ಸಮಿತಿ ಸದಸ್ಯ ಕೊಳೇನಹಳ್ಳಿ ಸತೀಶ್, ಪಾಲಿಕೆ ವಿರೋಧ ಪಕ್ಷದ ನಾಯಕ ಕೆ.ಆರ್. ಪ್ರಸನ್ನಕುಮಾರ್, ಮುಖಂಡರಾದ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಕಿಶೋರ್ ಕುಮಾರ್, ಪುಷ್ಪವಾಲಿ, ಭಾಗ್ಯಪೀಸಾಳೆ, ಗಾಯಿತ್ರಿ ಖಂಡೋಜಿರಾವ್, ಡಿ.ಎಲ್.ಶಿವಪ್ರಕಾಶ, ಶಿವಾನಂದ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.