ADVERTISEMENT

ಗೊಬ್ಬರ ಅಭಾವ ಸೃಷ್ಟಿಸಿ ದುಪ್ಪಟ್ಟು ಬೆಲೆ: ಕಿಸಾನ್‌ ಕಾಂಗ್ರೆಸ್‌

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2020, 13:43 IST
Last Updated 2 ಆಗಸ್ಟ್ 2020, 13:43 IST
ಜಗಳೂರಿನಲ್ಲಿ ನಡೆದ ತಾಲ್ಲೂಕು ಕಿಸಾನ್ ಕಾಂಗ್ರೆಸ್ ಸಭೆಯಲ್ಲಿ ಪದಾಧಿಕಾರಿಗಳು ಭಾಗವಹಿಸಿದರು.
ಜಗಳೂರಿನಲ್ಲಿ ನಡೆದ ತಾಲ್ಲೂಕು ಕಿಸಾನ್ ಕಾಂಗ್ರೆಸ್ ಸಭೆಯಲ್ಲಿ ಪದಾಧಿಕಾರಿಗಳು ಭಾಗವಹಿಸಿದರು.   

ದಾವಣಗೆರೆ: ಬರಗಾಲ ಪೀಡಿತ ಎಂದು ಕರೆಯಲಾಗುವ ಜಗಳೂರು ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ರೈತರು ಬಿತ್ತನೆ ಆರಂಭಿಸಿದ್ದಾರೆ. ಆದರೆ ಗೊಬ್ಬರದ ಅಂಗಡಿಗಳು ಕೃತಕವಾಗಿ ಗೊಬ್ಬರದ ಅಭಾವ ಸೃಷ್ಟಿಸಿ ಬೆಲೆ ದುಪ್ಪಟ್ಟುಗೊಳಿಸಿ ಮಾರಾಟ ಮಾಡುತ್ತಿದ್ದಾರೆ ಎಂದು ಕಿಸಾನ್ ಕಾಂಗ್ರೆಸ್‌ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್‌ ಆರೋಪಿಸಿದರು.

ಜಗಳೂರಿನಲ್ಲಿ ನಡೆದ ತಾಲ್ಲೂಕು ಕಿಸಾನ್ ಕಾಂಗ್ರೆಸ್ ಸಭೆಯಲ್ಲಿ ಅವರು ಮಾತನಾಡಿದರು.

ದುಪ್ಪಟ್ಟು ಬೆಲೆಗೆ ಗೊಬ್ಬರ ಮಾರಾಟ ಮಾಡುವ ಅಂಗಡಿಗಳಿಗೆ ಬೀಗ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ಜಗಳೂರು ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ, ಕಾರ್ಯದರ್ಶಿ ಚನ್ನಬಸಪ್ಪ, ರೋಹಿತ್, ಸಂಕಟಪ್ಪ, ಪ್ರವೀಣ್, ನೀಲಪ್ಪ ಮತ್ತು ಕಿಸಾನ್ ಕಾಂಗ್ರೆಸ್ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.