ADVERTISEMENT

ಜಿಲ್ಲೆಗೊಂದು ವಿಧಿವಿಜ್ಞಾನ ಪ್ರಯೋಗಾಲಯ: ಪೊಲೀಸ್‌ ಮಹಾನಿರ್ದೇಶಕ ಪ್ರವೀಣ ಸೂದ್‌

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 13:30 IST
Last Updated 26 ಫೆಬ್ರುವರಿ 2021, 13:30 IST
ಪ್ರವೀಣ ಸೂದ್
ಪ್ರವೀಣ ಸೂದ್   

ದಾವಣಗೆರೆ: ಪರೀಕ್ಷೆಗಾಗಿ ಕಳುಹಿಸಿದ ಸ್ಯಾಂಪಲ್‌ಗಳ (ಮಾದರಿಗಳು) ಫಲಿತಾಂಶ ಬರುವುದು ವಿಳಂಬವಾಗುತ್ತಿದೆ. ಶೀಘ್ರವಾಗಿ ವರದಿ ಬರುವಂತೆ ಮಾಡಲು ಜಿಲ್ಲೆಗೊಂದು ವಿಧಿವಿಜ್ಞಾನ ಪ್ರಯೋಗಾಲಯ ಆರಂಭಿಸಲಾಗುವುದು ಎಂದು ಪೊಲೀಸ್‌ ಮಹಾನಿರ್ದೇಶಕ ಪ್ರವೀಣ ಸೂದ್‌ ಹೇಳಿದರು.

ಇಲ್ಲಿನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಪತ್ರಕರ್ತರಿಗೆ ಈ ವಿಷಯ ತಿಳಿಸಿದರು.

‘ಕಡಿಮೆ ಪ್ರಯೋಗಾಲಯಗಳು ಇರುವುದರಿಂದ ಸ್ಯಾಂಪಲ್‌ಗಳ ಫಲಿತಾಂಶ ಒಂದು, ಎರಡು ವರ್ಷಗಳ ನಂತರ ಬರುತ್ತಿವೆ. 15 ದಿವಸ, ಗರಿಷ್ಠ ಮೂರು ತಿಂಗಳಿಗೆ ಫಲಿತಾಂಶ ಬರಬೇಕಾದರೆ ಜಿಲ್ಲೆಗೊಂದು ಪ್ರಯೋಗಾಲಯ ಆಗಬೇಕು. ವಿಧಿವಿಧಾನ ಪ್ರಯೋಗಾಲಯ ವ್ಯವಸ್ಥೆಯನ್ನು ಸಬಲೀಕರಗೊಳಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ’ ಎಂದರು.

ADVERTISEMENT

‘ಮರಳು ಅಕ್ರಮ ಸಾಗಣೆ, ಅಕ್ರಮ ಕ್ಲಬ್, ಕ್ವಾರಿಗಳ ಮೇಲೆ ನಿಗಾ ಇಟ್ಟು ಸೂಕ್ತ ಕ್ರಮ ಕೈಗೊಳ್ಳಲು ಈಗಾಗಲೇ ನಿರ್ದೇಶನ ನೀಡಲಾಗಿದೆ. ಡ್ರಗ್ಸ್ ವಿಚಾರದಲ್ಲಿ 10 ವರ್ಷಗಳ ಕೆಲಸವನ್ನು ನಮ್ಮ ಪೊಲೀಸರು ಒಂದೇ ವರ್ಷಕ್ಕೆ ಮಾಡಿದ್ದಾರೆ’ ಎಂದು ಶ್ಲಾಘಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.