ADVERTISEMENT

ದಾವಣಗೆರೆಯಲ್ಲಿ ಶಾಂತಿಯುತ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 7:38 IST
Last Updated 5 ಡಿಸೆಂಬರ್ 2020, 7:38 IST

ದಾವಣಗೆರೆ: ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಕರೆಯಂತೆ ದಾವಣಗೆರೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಿತು.

ನಗರದ ಜಯದೇವ ಸರ್ಕಲ್‌ಗೆ ಬಂದ್ ಕರೆ ಸೀಮಿತವಾಯಿತು.ಜನ ಜೀವನ ಎಂದಿನಂತ ಇತ್ತು . ಬಸ್, ಆಟೋ ಸಂಚಾರ ಎಂದಿನಂತೆ ಇದ್ದವು. ಅಂಗಡಿಗಳು ತೆರೆದಿದ್ದವು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಲಾಯಿತು.

ADVERTISEMENT

ಉರುಳು ಸೇವೆ ಮಾಡಿ ಕರವೇ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಜಾತಿಯ ಜನರ ಓಲೈಕೆಗೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಮಾನವ ಸರಪಳಿ ನಿರ್ಮಿಸಿ ಸ್ವಲ್ಪ ಹೊತ್ತು ರಸ್ತೆ ತಡೆ ಮಾಡಿದರು. ಮಹಿಳಾ ಕಾರ್ಯಕರ್ತೆಯರು ಯತ್ನಾಳ್ ಭಾವಚಿತ್ರಕ್ಕೆ ಸಗಣಿ ಎರಚಿ ಚಪ್ಪಲಿ ಸೇವೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.