ಹರಿಹರ: ತಾಲ್ಲೂಕಿನ ಹಳೇಹರ್ಲಾಪುರದ ಗ್ರಾಮದ ತುಂಗಾಭದ್ರಾ ನದಿಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿಯೊಬ್ಬರು ಕಣ್ಮರೆಯಾಗಿದ್ದಾರೆ.
ದಾವಣಗೆರೆ ದೇವರಾಜ ಅರಸು ಬಡಾವಣೆ ನಿವಾಸಿ ಎಚ್.ಬಿ. ಸುನಿಲ್‌ಕುಮಾರ್ (32) ಕಣ್ಮರೆಯಾದವರು. ಇವರು ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು. ಮಗಳ ಹುಟ್ಟುಹಬ್ಬ ಆಚರಿಸಲು ಗುತ್ತೂರು ಕಾಲೊನಿಯ ಪತ್ನಿಯ ಮನೆಗೆ ಬಂದಿದ್ದರು. ಭಾನುವಾರ ಮಧ್ಯಾಹ್ನ ಸ್ನಾನಕ್ಕೆಂದು ಹೊಳೆಯಲ್ಲಿ ಇಳಿದಾಗ ಈಜು ಬಾರದೇ ಮುಳುಗಿದ್ದಾರೆ. ಶವ ಪತ್ತೆಯಾಗಿಲ್ಲ. ಹರಿಹರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.