ADVERTISEMENT

ಯಡಿಯೂರಪ್ಪ ನೇತೃತ್ವದಲ್ಲೇ ಮುಂದಿನ ಚುನಾವಣೆ: ಮಾಡಾಳ್

ಕೆಎಸ್‌ಡಿಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 29 ಮೇ 2021, 4:23 IST
Last Updated 29 ಮೇ 2021, 4:23 IST
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೋವಿಡ್ ಕೇಂದ್ರಗಳಿಗೆ ಸೋಪು, ಸ್ಯಾನಿಟೈಸರ್ ವಿತರಿಸಿದರು
ಚನ್ನಗಿರಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕೋವಿಡ್ ಕೇಂದ್ರಗಳಿಗೆ ಸೋಪು, ಸ್ಯಾನಿಟೈಸರ್ ವಿತರಿಸಿದರು   

ಚನ್ನಗಿರಿ: ‘ರಾಜ್ಯದಲ್ಲಿ ಎರಡನೇ ಅಲೆ ತೀವ್ರಗೊಂಡಿದ್ದು, ಈ ಸಮಯದಲ್ಲಿ ಸಚಿವರು ಹಾಗೂ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿದ್ದು, ಕೊರೊನಾ ಸೋಂಕಿತರ ಸಂಕಷ್ಟಗಳಿಗೆ ನೆರವಾಗುವುದನ್ನು ಬಿಟ್ಟು, ಮುಖ್ಯಮಂತ್ರಿ ಬದಲಾವಣೆಗಾಗಿ ತೆರಳಿರುವುದು ಸರಿಯಾದ ಕ್ರಮವಲ್ಲ. ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರಿ ಯಲಿದ್ದಾರೆ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಕೆಎಸ್‌ಡಿಎಲ್ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕೋವಿಡ್ ಕೇಂದ್ರಗಳಿಗೆ ವೈಯಕ್ತಿಕವಾಗಿ ಮೈಸೂರು ಸ್ಯಾಂಡಲ್ ಸೋಪು, ಸ್ಯಾನಿಟೈಸರ್ ಹಾಗೂ ಮಾಸ್ಕ್‌ಗಳನ್ನು ವಿತರಿಸಿ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ 104 ಸ್ಥಾನಗಳಲ್ಲಿ ಗೆಲ್ಲಲು ಯಡಿಯೂರಪ್ಪ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಹಾಗೆಯೇ ಉತ್ತಮ ಆಡಳಿತವನ್ನು ನೀಡುವ ಮೂಲಕ ಜನಪರ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಏನೇ ಭಿನ್ನಾಭಿಪ್ರಾಯ
ಗಳು ಇದ್ದರೂ ಮುಖ್ಯಮಂತ್ರಿಯ
ವರೊಂದಿಗೆ ಚರ್ಚಿಸಿ, ಬಗೆಹರಿಸಿ
ಕೊಳ್ಳಬೇಕು. ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಚಿಂತನೆ ಮಾಡಿಲ್ಲ. ಸಚಿವರು, ಶಾಸಕರು ಮೊದಲು ಕ್ಷೇತ್ರಗಳ ಜನರ ಸಂಕಷ್ಟಗಳಿಗೆ ಸ್ಪಂದಿಸಲಿ ಎಂದು ಸಲಹೆ ನೀಡಿದರು.

ADVERTISEMENT

ಎರಡನೇ ಅಲೆ ರಾಜ್ಯದಲ್ಲಿ ಇಳಿಮುಖ
ವಾಗುತ್ತಿದೆ. ಆದರೂ ಗ್ರಾಮೀಣ ಪ್ರದೇಶಗಳಲ್ಲಿ ಜನರು ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸದೇ ಇರುವುದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೋವಿಡ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುವವರಿಗೆ ನಾಳೆಯಿಂದ ಪೌಷ್ಟಿಕ ಆಹಾರ, ಸಿಹಿ ಊಟ ನೀಡಲಾಗುವುದು ಎಂದು ಹೇಳಿದರು.

ಪ್ರಭಾರ ತಹಶೀಲ್ದಾರ್ ಅರುಣ್ ಕುಮಾರ್, ಸಿಪಿಐ ಮಧು, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಿ, ಮುಖ್ಯಾಧಿಕಾರಿ ಈ. ಬಸವರಾಜ್, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಆಡಳಿತ ವೈದ್ಯಾಧಿಕಾರಿ ಡಾ. ಅಶೋಕ್, ತಾಲ್ಲೂಕು ವೈದ್ಯಾಧಿಕಾರಿ
ಡಾ. ಪ್ರಭು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.