
ಚನ್ನಗಿರಿ: ಪಟ್ಟಣದ ಪುರಸಭೆ ಬಸ್ ನಿಲ್ದಾಣದಲ್ಲಿ 8 ವರ್ಷಗಳ ಹಿಂದೆ ಪೊಲೀಸ್ ಚೌಕಿ ನಿರ್ಮಿಸಲಾಗಿದ್ದು, ಇಲ್ಲಿ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿಲ್ಲ.
ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳು ಬಂದು ಹೋಗುವ ಬಸ್ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಸುಗಮ ಬಸ್ ಗಳ ಸಂಚಾರಕ್ಕೆ ಅಡ್ಡಿಯಾಗುತ್ತದೆ. ಹಾಗೆಯೇ ಬಸ್‌ಗಳೂ ನಿಗದಿತ ಪ್ಲಾಟ್ ಫಾರಂನಲ್ಲಿ ನಿಲುಗಡೆ ಮಾಡುವುದಿಲ್ಲ. ಇದಕ್ಕೆಲ್ಲಾ ಕಡಿವಾಣ ಹಾಕಬೇಕಾಗಿರುವ ಪೊಲೀಸ್ ಸಿಬ್ಬಂದಿ ಮಾತ್ರ ಇತ್ತ ಕಡೆ ಸುಳಿಯದೇ ಇರುವುದರಿಂದ ಸುಗಮ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ.
ಪೊಲೀಸ್ ಚೌಕಿಯಲ್ಲಿ ಹಮಾಲರು ಕುಳಿತುಕೊಂಡು ವಿಶ್ರಾಂತಿ ಪಡೆದುಕೊಳ್ಳುವಂತಾಗಿದೆ. ಇದು ಪೊಲೀಸ್ ಚೌಕಿಯೇ ಎಂಬ ಅನುಮಾನ ಜನರಲ್ಲಿ ಉಂಟಾಗಿದೆ. ಆದ್ದರಿಂದ ಬಸ್ ನಿಲ್ದಾಣದಲ್ಲಿರುವ ಪೊಲೀಸ್ ಚೌಕಿಗೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ ಸುಗಮ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.