ADVERTISEMENT

ವೈದ್ಯರ, ಲೆಕ್ಕಪರಿಶೋಧಕರ ಪಾತ್ರ ಮಹತ್ವದ್ದು: ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ಜುಲೈ 2021, 4:41 IST
Last Updated 2 ಜುಲೈ 2021, 4:41 IST
ದಾವಣಗೆರೆಯಲ್ಲಿ ವೈದ್ಯರು ಮತ್ತು ಲೆಕ್ಕಪರಿಶೋಧಕರನ್ನು ಸನ್ಮಾನಿಸಲಾಯಿತು
ದಾವಣಗೆರೆಯಲ್ಲಿ ವೈದ್ಯರು ಮತ್ತು ಲೆಕ್ಕಪರಿಶೋಧಕರನ್ನು ಸನ್ಮಾನಿಸಲಾಯಿತು   

ದಾವಣಗೆರೆ: ಇಂದಿನ ದೇಶದ ಆರ್ಥಿಕ ಮತ್ತು ಆರೋಗ್ಯ ಕ್ಷೇತ್ರದ ಸಂಕಷ್ಟ ಸಮಯದಲ್ಲಿ ದೇಶವನ್ನು ಉಳಿಸಿ ಬೆಳೆಸುವಲ್ಲಿ ವೈದ್ಯರು ಮತ್ತು ಲೆಕ್ಕಪರಿಶೋಧಕರ ಕೆಲಸ ಮಹತ್ವದ್ದು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

‌ನಗರದ ರೋಟರಿ ಬಾಲಭವನದಲ್ಲಿ ವೈದ್ಯರ ಮತ್ತು ಲೆಕ್ಕಪರಿಶೋಧಕರ ದಿನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವೈದ್ಯರು ಮತ್ತು ಲೆಕ್ಕಪರಿಶೋಧಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

ದೇಶದ ಆರೋಗ್ಯ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳು ಉಂಟಾಗಿವೆ. ಇಂತಹ ಸಂಕಷ್ಟದ ಸಮಯದಲ್ಲಿ ಕಳೆದ 15 ತಿಂಗಳಿನಿಂದ ವೈದ್ಯರು ಹಗಲು ರಾತ್ರಿಯೆನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ. ಲೆಕ್ಕ
ಪರಿಶೋಧಕರು ಸಹ ಕಾರ್ಯನಿರ್ವಹಿಸುತ್ತಿದ್ದು, ದೇಶ ಆರೋಗ್ಯದ ಜೊತೆ ಆರ್ಥಿಕ ಸಂಕಷ್ಟದಿಂದಲೂ ಹೊರಬರಬೇಕಾಗಿದೆ ಎಂದರು.

ADVERTISEMENT

ಲೆಕ್ಕಪರಿಶೋಧಕ ಅಥಣಿ ವೀರಣ್ಣ ಮಾತನಾಡಿ, ‘ಶಾಮನೂರು ಶಿವಶಂಕರಪ್ಪ ಮತ್ತು ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ದೂರದೃಷ್ಟಿಯಿಂದ ದಾವಣಗೆರೆ ಜನರ ಜೀವ ಉಳಿಸುವ ಕೆಲಸ ನಡೆಯುತ್ತಿದೆ. ಅನೇಕ ಅಡೆತಡೆಗಳು ಬಂದರೂ ಅವುಗಳನ್ನು ಎದುರಿಸಿ ದಾವಣಗೆರೆ ಜನರಿಗೆ ಲಸಿಕೆ ನೀಡುತ್ತಿದ್ದಾರೆ’ ಎಂದು ಪ್ರಶಂಶಿಸಿದರು.

ಹಿರಿಯ ಲೆಕ್ಕಪರಿಶೋಧಕ ಅಥಣಿ ವೀರಣ್ಣ ಹಾಗೂ ವೈದ್ಯರ ಪರವಾಗಿ ಡಾ. ಎಸ್.ಬಿ. ಮುರುಗೇಶ್, ಡಾ. ವಾಮನ್ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.