ADVERTISEMENT

ದಾವಣಗೆರೆಯಲ್ಲಿ ವೃದ್ಧೆ ಸೇರಿ ಮೂವರಿಗೆ ಕೋವಿಡ್‌-19 ದೃಢ

​ಪ್ರಜಾವಾಣಿ ವಾರ್ತೆ
Published 23 ಮೇ 2020, 9:13 IST
Last Updated 23 ಮೇ 2020, 9:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ದಾವಣಗೆರೆ: ಜಿಲ್ಲೆಯಲ್ಲಿ ವೃದ್ಧೆ ಸೇರಿ ಮೂವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದನ್ನುಶನಿವಾರ ಬಂದ ವೈದ್ಯಕೀಯ ವರದಿ ಖಚಿತಪಡಿಸಿದೆ.

ಜಾಲಿನಗರದ 48 ವರ್ಷದ ಸೋಂಕಿತ ವ್ಯಕ್ತಿಯ (ಪಿ.1251) ಸಂಪರ್ಕದಿಂದ 42 ವರ್ಷದ ಪುರುಷ (ಪಿ.1808), 69 ವರ್ಷದ ವೃದ್ಧೆ (ಪಿ.1809) ಹಾಗೂ 45 ವರ್ಷದ ಪುರುಷನಿಗೆ (ಪಿ.1852) ಕೊರೊನಾ ಸೋಂಕು ತಗುಲಿದೆ.

ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣದ ಸಂಖ್ಯೆ 121ಕ್ಕೆ ಏರಿಕೆಯಾಗಿದೆ. ಇದುವರೆಗೆ ಒಟ್ಟು 21 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್‌ನಿಂದ ನಾಲ್ವರು ಮೃತಪಟ್ಟಿದ್ದಾರೆ. 96 ಕೋವಿಡ್‌ ಸಕ್ರಿಯ ಪ್ರಕರಣಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.