ADVERTISEMENT

ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2024, 4:46 IST
Last Updated 30 ಸೆಪ್ಟೆಂಬರ್ 2024, 4:46 IST
<div class="paragraphs"><p>ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ</p></div>

ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

   

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗಿದ್ದು, ಹಳ್ಳ ಹಾಗೂ ಕಾಲುವೆಗಳಿಗೆ ಜೀವಕಳೆ ಬಂದಿದೆ.

ನಸುಕಿನ 3.15ಕ್ಕೆ ಆರಂಭವಾದ ಮಳೆ ಸುಮಾರು ಒಂದು ಗಂಟೆ ಬಿರುಸಾಗಿ ಸರಿಯಿತು. ಸಿಡಿಲಿನ ಅಬ್ಬರ ಜೋರಾಗಿತ್ತು. ಚರಂಡಿಗಳಲ್ಲಿ ನೀರು ರಭಸವಾಗಿ ಹರಿಯಿತು. ಕರೆ, ಕಟ್ಟೆ, ಚೆಕ್ ಡ್ಯಾಂಗಳು ಸೇರಿ ಜಲಮೂಲಗಳಿಗೆ ನೀರು ಹರಿದುಬಂದಿದೆ.

ADVERTISEMENT

ದಾವಣಗೆರೆ, ಚನ್ನಗಿರಿ, ಹರಿಹರ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಮಾಯಕೊಂಡ ಸುತ್ತ ಉತ್ತಮ ಮಳೆಯಾಗಿದ್ದು, ಜಮೀನುಗಳಲ್ಲಿ ನೀರು ಹರಿಯುತ್ತಿದೆ. ಮೆಕ್ಕೆಜೋಳ ಸೇರಿ ವಿವಿಧ ಬೆಳೆಗಳು ಅಲ್ಲಲ್ಲಿ ಜಲಾವೃತ ಆಗಿವೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.