ADVERTISEMENT

ನಾಳೆ ಸಾಮೂಹಿಕ ವಿವಾಹ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 11:30 IST
Last Updated 29 ಜನವರಿ 2020, 11:30 IST

ದಾವಣಗೆರೆ: ಇಲ್ಲಿನ ಗಾಂಧಿನಗರದ ಒಂದನೇ ಕ್ರಾಸ್‌ನಲ್ಲಿರುವ ಶ್ರೀಗುರುರಾಮದಾಸಸ್ವಾಮಿ ಅಧ್ಯಾತ್ಮ ಮಂದಿರ ಟ್ರಸ್ಟ್ ನಿಂದ ಜ.30ರಂದು 30ನೇ ವರ್ಷದ ಸಾಮೂಹಿಕ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಅಧ್ಯಕ್ಷ ಬಿ.ಎಚ್.ವೀರಭದ್ರಪ್ಪ ಹೇಳಿದರು.

‘ಅಂದು 30ನೇ ವರ್ಷದ ಗುರು ಮಾದಾರ ಚನ್ನಯ್ಯ ಸ್ವಾಮೀಜಿ ಜಯಂತ್ಯುತ್ಸವ, ರಾಮದಾಸ ಸ್ವಾಮಿ, ಮಲ್ಲಯ್ಯ ಸ್ವಾಮಿ, ಕೊಂಡಯ್ಯ ಸ್ವಾಮಿಗಳ ಪುಣ್ಯಾರಾಧನೆಯೂ ನಡೆಯಲಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗಾಂಧಿನಗರದಲ್ಲಿರುವ ಟ್ರಸ್ಟ್ ಆವರಣದಲ್ಲಿ ಜ.30ರಂದು ಬೆಳಿಗ್ಗೆ 10.30ರಿಂದ 12 ರವರೆಗೆ ಕಾರ್ಯಕ್ರಮ ನಡೆಯಲಿದ್ದು, 10 ಜೋಡಿಗಳ ಸಾಮೂಹಿಕ ವಿವಾಹ ನಡೆಯಲಿದ್ದು, ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ, ಹೆಬ್ಬಾಳು ವಿರಕ್ತ ಮಠದ ಗುರುಬಸವ ಸ್ವಾಮೀಜಿ, ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ವಿರಕ್ತಮಠದ ಬಸವಪ್ರಭು ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

‘ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಉದ್ಘಾಟಿಸುವರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಧು–ವರರಿಗೆ ಮಾಂಗಲ್ಯ ವಿತರಿಸುವರು. ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಶಾಸಕ ಎನ್.ಲಿಂಗಣ್ಣ, ಬಿ.ಎಸ್.ಉಮಾಪತಿ, ಎ.ಜೆ. ಸಂದೀಪ್ ಭಾಗವಹಿಸುವರು’ ಎಂದು ಹೇಳಿದರು.

ಪಾಲಿಕೆ ಸದಸ್ಯ ಜೆ.ಡಿ. ಪ್ರಕಾಶ್, ಬಿ.ಎಂ.ಈಶ್ವರಪ್ಪ, ಬಿ.ಎಂ.ರಾಮಸ್ವಾಮಿ, ರಾಕೇಶ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.