ADVERTISEMENT

ದಾವಣಗೆರೆ | ಚಾವಣಿಯ ಪದರ ಬಿದ್ದು ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2024, 16:19 IST
Last Updated 17 ಡಿಸೆಂಬರ್ 2024, 16:19 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾವಣಗೆರೆ: ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಾವಣಿಯ ಪದರ ಕಳಚಿಬಿದ್ದು ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ನಡೆದಿದೆ.

ವಿಜಯನಗರ ಜಿಲ್ಲೆಯ ಹಲವಾಗಲು ಗ್ರಾಮದ ಕಾವೇರಿ (36), ಪ್ರೇಮಾ (46) ಹಾಗೂ ಎರಡೂವರೆ ವರ್ಷದ ಮಗು ನೇತ್ರಾ ಗಾಯಗೊಂಡವರು. ತುರ್ತು ಚಿಕಿತ್ಸಾ ಘಟಕದ ಸಮೀಪ ಈ ಅವಘಡ ನಡೆದಿದೆ. ಮೂವರಿಗೂ ಚಿಕ್ಕ ಗಾಯಗಳಾಗಿದ್ದು, ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ADVERTISEMENT

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಯೊಬ್ಬರನ್ನು ನೋಡಲು ಬಂದಿದ್ದಾಗ ಚಾವಣಿಯ ಪದರ ಕಳಚಿ ಉದುರಿದೆ. ಸಮೀಪದಲ್ಲೇ ಇದ್ದ ಇವರಿಗೆ ಪದರದ ಚೂರುಗಳು ಸಿಡಿದು ಗಾಯಗಳಾಗಿವೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.