
ಪ್ರಜಾವಾಣಿ ವಾರ್ತೆ
ಸಾಸ್ವೆಹಳ್ಳಿ: ಸಮೀಪದ ಹನಗವಾಡಿ ಬಳಿಯ ರಸ್ತೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಲಿಂಗಾಪುರ ಗ್ರಾಮದ ಗುತ್ತಿಗೆದಾರ ರಾಘವೇಂದ್ರ ಎಲ್.ಜಿ. (45) ಮೃತಪಟ್ಟಿದ್ದಾರೆ.
ಭಾನುವಾರ ಸಂಜೆ ರಾಘವೇಂದ್ರ ಅವರು ವಿದ್ಯುತ್ ಕಂಬಗಳನ್ನು ಹಾಕಲೆಂದು ಟ್ರ್ಯಾಕ್ಟರ್ ಡಿಗ್ಗರ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದರು.
ಈ ವೇಳೆ ಹನಗವಾಡಿ ರಸ್ತೆಯಲ್ಲಿ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳೀಯರು ಅವರನ್ನು ಹೊರತೆಗೆದು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.
ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.