ADVERTISEMENT

ದೇಶದ್ರೋಹಿಗಳನ್ನು ಕಂಡಲ್ಲಿ ಗಲ್ಲಿಗೇರಿಸಬೇಕು: ರೇಣುಕಾಚಾರ್ಯ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 13:23 IST
Last Updated 21 ಫೆಬ್ರುವರಿ 2020, 13:23 IST
ಎಂ.ಪಿ.ರೇಣುಕಾಚಾರ್ಯ
ಎಂ.ಪಿ.ರೇಣುಕಾಚಾರ್ಯ   

ದಾವಣಗೆರೆ:ದೇಶದ್ರೋಹಿಗಳಿಗೆ ಕಂಡಲ್ಲಿ ಗುಂಡು ಹಾರಿಸಬೇಕು. ಗಲ್ಲಿಗೇರಿಸಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಎಂ.ಪಿ. ರೇಣುಕಾಚಾರ್ಯ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಪಾಕ್ ಘೋಷಣೆಗಳು ಹೆಚ್ಚುತ್ತಿವೆ.ಇದರ ಹಿಂದಿರುವರ ಬಗ್ಗೆ ಸರ್ಕಾರ ತನಿಖೆ ನಡೆಸುತ್ತಿದೆ ಎಂದು ಹೇಳಿದರು.

‘ಬಿಎಸ್‌ವೈ ವಿರುದ್ಧ ಯಾರು ದೂರು ಕೊಟ್ಟಿಲ್ಲ.ಎಲ್ಲ ಶಾಸಕರು ಒಂದಾಗಿದ್ದೇವೆ. ಬಿಎಸ್‌ವೈ ತಂದೆ ಇದ್ದ ಹಾಗೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಅವರಿಗೆ ಹನ್ನೊಂದು ಶಾಸಕರು ದೂರು ನೀಡಿದ್ದು ಸುಳ್ಳು.ಇದು ಕೇವಲ ಮಾಧ್ಯಮಗಳ ಸೃಷ್ಟಿ.ಆಡಳಿತದಲ್ಲಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪ ಇಲ್ಲ.ವಿಜಯೇಂದ್ರ ಒಬ್ಬ ಯುವ ಮುಖಂಡ.ರಾಜ್ಯ ಪ್ರವಾಸ ಮಾಡುತ್ತಾರೆ. ಪಕ್ಷ ಸಂಘಟನೆ ಮಾಡುತ್ತಾರೆ.ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎನ್ನುವುದು ತಪ್ಪು.ಯಾವುದೇ ಇಲಾಖೆ ಅಥವಾ ಶಾಸಕರ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ.ನನಗೆ ಕೆಲಸವಿದ್ದರೂ ನಾನೂ ಅವರ ಬಳಿ ಹೋಗುತ್ತೇನೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.