ಸಾಸ್ವೆಹಳ್ಳಿ: ಕ್ಷಯ ರೋಗ ಪ್ರಾಥಮಿಕ ಹಂತದಲ್ಲಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ಸರಿಯಾದ ಸಮಯದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿರುತ್ತದೆ ಎಂದು ಸಾಸ್ವೆಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನರೇಂದ್ರ ಎಚ್.ಜೆ ತಿಳಿಸಿದರು.
ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ಹಾಗೂ ಜೆಎಸ್‌ಡಬ್ಲ್ಯೂ ಸಹಯೋಗದಲ್ಲಿ ಕ್ಷಯ ರೋಗಿಗಳಿಗೆ ಫುಡ್ ಕಿಟ್ ವಿತರಿಸಿ ಅವರು ಮಾತನಾಡಿದರು.
ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ಔಷಧೋಪಚಾರ ಮಾಡಿದಾಗ ಕಾಯಿಲೆ ಕಡಿಮೆ ಆಗುತ್ತದೆ. ಇದು ಅಂಟುರೋಗವಾಗಿದ್ದು, ರೋಗಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ನಾಗರಾಜಪ್ಪ, ಔಷಧ ವಿತರಣಾಧಿಕಾರಿ ತಿಪ್ಪೇಸ್ವಾಮಿ, ಹಿರಿಯ ಆರೋಗ್ಯ ಪ್ರಾಥಮಿಕ ಸುರಕ್ಷಣಾಧಿಕಾರಿ ಪೂರ್ಣಿಮಾ ಪಾಟೀಲ್, ಕಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಸ್ವಾಮಿ ಡಿ. ಬಿ. ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.