ಹೊನ್ನಾಳಿ (ದಾವಣಗೆರೆ): ಪಟ್ಟಣದ ಹೊರಭಾಗದ ತುಂಗಭದ್ರಾ ನದಿಯಲ್ಲಿ ಸೋಮವಾರ ತೆಪ್ಪ ಮಗುಚಿ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಹೊನ್ನಾಳಿ ಪಟ್ಟಣದ ತಿಪ್ಪೇಶ್ (25) ಹಾಗೂ ಮುಕ್ತಿಯಾರ್ (19) ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರು ಬದುಕುಳಿದಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೀನು ಹಿಡಿಯಲು ನದಿಗೆ ಇಳಿದಾಗ ಘಟನೆ ಸಂಭವಿಸಿದೆ ಎಂದು ಹೊನ್ನಾಳಿ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.
ನದಿಯಿಂದ ಮರಳು ತೆಗೆದು ದಡಕ್ಕೆ ಸಾಗಿಸುವಾಗ ನಿಯಂತ್ರಣ ಕಳೆದುಕೊಂಡ ತೆಪ್ಪ ಮಗುಚಿದೆ ಎಂಬುದಾಗಿ ಸ್ಥಳೀಯರು ಆರೋಪಿಸಿದ್ದಾರೆ.
ಮೃತದೇಹಗಳಿಗೆ ಅಗ್ನಿಶಾಮಕ ಮತ್ತು ತುರ್ತುಸೇವಾ ಠಾಣೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.