ಕಡರನಾಯ್ಕನಹಳ್ಳಿ: ಸಮೀಪದ ಉಕ್ಕಡಗಾತ್ರಿ ಅಜ್ಜಯ್ಯನ ದೇವಸ್ಥಾನದ ಬಳಿ ತುಂಗಭದ್ರಾ ನದಿ ತುಂಬಿ ಹರಿಯುತ್ತಿದ್ದು, ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ.
ದೇವಸ್ಥಾನದ ನದಿಯ ಇಕ್ಕೆಲಗಳಲ್ಲಿ ಇದ್ದ ಅಂಗಡಿಗಳು ಜಲಾವೃತಗೊಂಡಿವೆ. ಮಂಗಳವಾರ ಬೆಳಿಗ್ಗೆಯಿಂದಲೂ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದ್ದು, ಭಾನುವಳ್ಳಿ ಹಳ್ಳದಲ್ಲಿ ನೀರು ಹರಿಯುತ್ತಿದೆ. ಇದರಿಂದ ಗ್ರಾಮದ ಕೊಳವೆಬಾವಿಗಳಲ್ಲಿ ಅಂತರ್ಜಲಮಟ್ಟ ಹೆಚ್ಚಾಗುತ್ತದೆ ಎಂದು ರೈತ ಮುಖಂಡ ಪ್ರಕಾಶ್ ಸಂತಸ ವ್ಯಕ್ತಪಡಿಸಿದ್ದಾರೆ.
ಹೊಳೆಸಿರಿಗೆರೆ, ಹೊಸಪಾಳ್ಯ, ಜಿಟಿ ಕಟ್ಟಿ ಗ್ರಾಮಗಳ ಕೆರೆಗಳಲ್ಲಿ ನೀರು ಸಂಗ್ರಹವಾಗುತ್ತಿದೆ ಎಂದು ರೈತರು ಸಂತಸ ಪಡುತ್ತಿದ್ದಾರೆ.
ತೋಟಗಾರಿಕೆ ಬೆಳೆಗಳಿಗೆ ಈ ಮಳೆ ವರದಾನವಾಗಿದೆ ಎಂದು ಜಿಟಿ ಕಟ್ಟಿ ಗ್ರಾಮದ ಬಸಣ್ಣ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.